ಬೆಂಗಳೂರು : ಇಂದಿನಿಂದ ಸಸ್ಯಕಾಶಿ ಲಾಲ್ ಬಾಗ್’ನಲ್ಲಿ ಫ್ಲವರ್ ಶೋ ಆರಂಭವಾಗಲಿದ್ದು, ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.ಆ.4ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ವಿವಿಧ ರೀತಿಯ ಫಲಪುಷ್ಪಗಳು ಪುಷ್ಪ ಪ್ರಿಯರ ಗಮನ ಸೆಳೆಯಲಿದೆ. ತೋಟಗಾರಿಕೆ ಇಲಾಖೆ, ನಗರದ ವಿವಿಧ ಲಾಭರಹಿತ ಸಂಸ್ಥೆಗಳ ಸಹಯೋಗದೊಂದಿಗೆ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ ನಡೆಸುತ್ತಿದ್ದು, ವಿಶೇಷ ಅಂದರೆ ಈ ಬಾರಿ 214 ನೇ ಫಲಪುಷ್ಪ ಪ್ರದರ್ಶನ ನೋಡುಗರ ಮನ ಸೂರೆಗೊಳಿಸಲಿದೆ.
ಲಾಲ್ ಬಾಗ್ ಫ್ಲವರ್ ಶೋ ನೋಡಲು ಲಕ್ಷಾಂತರ ಜನರು ಬರುವ ನಿರೀಕ್ಷೆಯಿದ್ದು, ಪರ್ಯಾಯ ರಸ್ತೆಗಳಲ್ಲಿಸಂಚರಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.
ವಾಹನ ನಿಲುಗಡೆ ನಿರ್ಬಂಧಿಸಿರುವ ಪ್ರದೇಶಗಳು
1) ಸಿದ್ದಯ್ಯ ರಸ್ತೆಯಲ್ಲಿಊರ್ವಶಿ ಥಿಯೇಟರ್ ಜಂಕ್ಷನ್ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್ವರೆಗೆ
2) ಬಿಎಂಟಿಸಿ ರಸ್ತೆಯ ಎರಡೂ ಬದಿ
3) ಡಾ.ಮರಿಗೌಡ ರಸ್ತೆ
4) ಲಾಲ್ಬಾಗ್ ಮುಖ್ಯ ದ್ವಾರದಿಂದ ನಿಮ್ಹಾನ್ಸ್ವರೆಗೆ ರಸ್ತೆಯ ಎರಡೂ ಬದಿ
5) ಕೆ.ಎಚ್.ರಸ್ತೆಯಲ್ಲಿಕೆ.ಎಚ್.ವೃತ್ತದಿಂದ ಶಾಂತಿನಗರ ಜಂಕ್ಷನ್ವರೆಗೆ ರಸ್ತೆಯ ಬದಿ
6)ಲಾಲ್ಬಾಗ್ ರಸ್ತೆಯಲ್ಲಿಸುಬ್ಬಯ್ಯ ವೃತ್ತದಿಂದ ಲಾಲ್ಬಾಗ್ ಮುಖ್ಯದ್ವಾರದವರೆಗೆ
7) ಲಾಲ್ಬಾಗ್ ಪಶ್ಚಿಮ ದ್ವಾರದಿಂದ ಆರ್.ವಿ.ಟೀಚರ್ಸ್ ಕಾಲೇಜುವರೆಗೆ
8) ಆರ್.ವಿ.ಟೀಚರ್ಸ್ ಕಾಲೇಜಿನಿಂದ ಅಶೋಕ ಪಿಲ್ಲರ್ವರೆಗೆ
9) ಅಶೋಕ ಪಿಲ್ಲರ್ನಿಂದ ಸಿದ್ದಾಪುರ ಜಂಕ್ಷನ್ವರೆಗೆ
ವಾಹನ ಪಾರ್ಕಿಂಗ್ ಮಾಡಬಹುದಾದ ಸ್ಥಳಗಳು
1) ಡಾ.ಮರಿಗೌಡ ರಸ್ತೆಯ ಹಾಪ್ಕಾಮ್ಸ್ ಬಳಿ ಬೈಕ್ ಮತ್ತು ನಾಲ್ಕು ಚಕ್ರದ ವಾಹನಗಳು
2) ಜೆ.ಸಿ.ರಸ್ತೆಯ ಕಾರ್ಪೊರೇಷನ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಹಾಗೂ ನಾಲ್ಕು ಚಕ್ರದ ವಾಹನಗಳು
3) ದ್ವಿಚಕ್ರ ವಾಹನಗಳಿಗೆ ಡಾ.ಮರಿಗೌಡ ರಸ್ತೆಯ ಅಲ್ ಅಮೀನ್ ಕಾಲೇಜು ಆವರಣ
4) ನಾಲ್ಕು ಚಕ್ರದ ವಾಹನಗಳಿಗೆ ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಬಳಿ
76 ನೇ ಸ್ವತಂತ್ರ ಮಹೋತ್ಸವದ ಹಿನ್ನೆಲೆಯಲ್ಲಿ 214 ನೇ ಫ್ಲವರ್ ಶೋ ಆಯೋಜನೆ ಮಾಡಲಾಗಿದ್ದು, ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯಲ್ಲಿ ಈ ವರ್ಷದ ಫ್ಲವರ್ ಶೋ ಮೂಡಿ ಬರುತ್ತಿದೆ. ಫ್ಲವರ್ ಶೋ ಬರುವವರಿಗೆ ಎಂಟ್ರಿ ಫೀಜ್ ದೊಡ್ಡವರಿಗೆ 70 ರೂ ಹಾಗೂ ಮಕ್ಕಳಿಗೆ 30 ರುಪಾಯಿ ನಿಗದಿ ಮಾಡಲಾಗಿದೆ. ಈ ಬಾರಿ 10 ರಿಂದ 12 ಲಕ್ಷದಷ್ಟು ಜನರು ಬರುವ ಸಾಧ್ಯತೆಯಿದ್ದು. ಒಟ್ಟು 10 ದಿನಗಳ ಕಾಲ ಫ್ಲವರ್ ಶೋ ಇರಲಿದೆ. ಶಾಲಾ ಮಕ್ಕಳಿಗೆ ಪ್ರವೇಶ ಉಚಿತವಾಗಿರಲಿದೆ, 200 ಸಿಸಿ ಟಿವಿ ಕ್ಯಾಮರಾಗಳನ್ನ ಅಳವಡಿಕೆ ಮಾಡಲಾಗಿದೆ.