alex Certify ‘ಆಯುಷ್ಮಾನ್ ಕಾರ್ಡ್’ ದಾರರ ಗಮನಕ್ಕೆ : ಈ ಆಸ್ಪತ್ರೆಗಳಲ್ಲಿ ಸಿಗಲಿದೆ 5 ಲಕ್ಷರೂವರೆಗೆ ಉಚಿತ ಚಿಕಿತ್ಸೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಆಯುಷ್ಮಾನ್ ಕಾರ್ಡ್’ ದಾರರ ಗಮನಕ್ಕೆ : ಈ ಆಸ್ಪತ್ರೆಗಳಲ್ಲಿ ಸಿಗಲಿದೆ 5 ಲಕ್ಷರೂವರೆಗೆ ಉಚಿತ ಚಿಕಿತ್ಸೆ.!

ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿಗಳ ಜನ ಆರೋಗ್ಯ ಯೋಜನಾ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪ್ರಯೋಜನ ಪಡೆಯಲು ಇಂದೇ ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್‍ಗಳನ್ನು ನಿಮ್ಮ ಹತ್ತಿರದ ಗ್ರಾಮ ಒನ್ ನಿಂದ ರೇಷನ್‍ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ಹಾಗೂ ಮೊಬೈಲ್ ಸಂಖ್ಯೆ ನೀಡಿ ಉಚಿತವಾಗಿ ಪಡೆಯಿರಿ.

ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿಪಿಎಲ್ ಕಾರ್ಡ್‍ನ ಪ್ರತೀ ಕುಟುಂಬಗಳಿಗೆ ರೂ.5 ಲಕ್ಷ ವಾರ್ಷಿಕ ಮಿತಿಯೊಳಗೆ ಉಚಿತ ಚಿಕಿತ್ಸೆ, ಎಪಿಎಲ್ ಕಾರ್ಡ್‍ನ ಪ್ರತೀ ಕುಟುಂಬಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30 ರಷ್ಟು ವಾರ್ಷಿಕವಾಗಿ ರೂ.1.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸುತ್ತದೆ.

ಈ ಕಾರ್ಡ್‍ನ ನೆರವಿನಿಂದ ದೇಶದಲ್ಲಿ ಎಲ್ಲೇ ಇದ್ದರೂ ಉಚಿತವಾಗಿ ಚಿಕಿತ್ಸೆಯನ್ನು ಪಡೆಯಲು ಪೋರ್ಟಬಿಲಿಟಿ ಸೌಲಭ್ಯವಿದೆ. ತುರ್ತು ಸಂದರ್ಭದಲ್ಲಿ 171 ಚಿಕಿತ್ಸಾ ವಿಧಾನಗಳಿಗೆ ರೋಗಿಯು ನೇರವಾಗಿ ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ರೆಫರಲ್ ಅವಶ್ಯಕತೆ ಇರುವುದಿಲ್ಲ. ಈ ಕಾರ್ಡ್‍ನ್ನು 14 ಸಂಖ್ಯೆಯ ಆಭಾ ಹೆಲ್ತ್ ಐಡಿಯೊಂದಿಗೆ ಸಂಯೋಜಿಸಲಾಗಿದೆ. ಕಾರ್ಡ್ ಇದ್ದರೂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿಲ್ಲದಿದ್ದಲ್ಲಿ ಮಾತ್ರ ರೆಫರಲ್ ಆಧಾರದ ಮೇಲೆ ನೋಂದಾಯಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು. ಕೊಡಗು ಜಿಲ್ಲೆಯಲ್ಲಿ 4,24,026 AB-PMJAY-CM-Ark ಕಾರ್ಡ್ ಜನರೇಟ್ ಮಾಡಿಸಬೇಕಾದ ಗುರಿ ಇದ್ದು, ಈಗ 1,33,421 AB-PMJAY-CM-Ark ಕಾರ್ಡ್‍ನ್ನು ಜನರೇಟ್ ಮಾಡಲಾಗಿದೆ. ಉಳಿದ 2,90,605 AB-PMJAY-CM-Ark ಕಾರ್ಡ್‍ಗಳನ್ನು ಮಾಡಿಸಲು ಸಾರ್ವಜನಿಕರು ಸಹಕರಿಸಿ ಇದರ ಉಪಯೋಗವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ 104 ಅಥವಾ 14555 ಕ್ಕೆ ಕರೆಮಾಡಿ. “ನಿಮ್ಮ ಆರೋಗ್ಯ ನಮ್ಮ ಬದ್ಧತೆ” ಟೋಲ್ ಫ್ರೀ ಸಂಖ್ಯೆ: 18004258330 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...