ಚಾಮರಾಜನಗರ : ದೀಪಾವಳಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಸಾಧ್ಯತೆಯಿದೆ.
ಸಂಚಾರ ದಟ್ಟಣೆಯಿಂದ ಅಪಘಾತ ಸಂಭವಿಸುವ ಸಾಧ್ಯತೆಯೂ ಇದೆ. ಹೀಗಾಗಿ ದ್ವಿಚಕ್ರ ವಾಹನ, ಆಟೋಗಳನ್ನು ಮಲೆ ಮಹದೇಶ್ವರ ಬೆಟ್ಟಕ್ಕೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ದ್ವಿ ಚಕ್ರ ವಾಹನ ಹಾಗೂ ಆಟೋಗಳನ್ನು ತಾಳುಬೆಟ್ಟದಲ್ಲಿ ನಿಲ್ಲಿಸಲು ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ದಿನಾಂಕ: 11-11-2023 ರಿಂದ 14-11-2023 ರವರೆಗೆ ಶ್ರೀ ಮಲೈ ಮಹದೇಶ್ವರ ಬೆಟ್ಟದಲ್ಲಿ ಜರುಗಲಿರುವ ದೀಪಾವಳಿ ಜಾತ್ರಾ ಪ್ರಯುಕ್ತ ಆಗಮಿಸುವ ಭಕ್ತರ ಸುರಕ್ಷತಾ ದೃಷ್ಟಿಯಿಂದ ಎಲ್ಲಾ ಮಾದರಿಯ ದ್ವಿಚಕ್ರ ವಾಹನ ಹಾಗೂ ಆಟೋರಿಕ್ಷಾ ವಾಹನಗಳನ್ನು ದಿನಾಂಕ: 11-11-2023 ರ ಸಂಜೆ 6.00 ಗಂಟೆಯಿಂದ 14-11-2023 ರ ಸಂಜೆ 7.00 ಗಂಟೆಯವರೆಗೆ ತಾತ್ಕಾಲಿವಾಗಿ ನಿರ್ಬಂಧಿಸಿರುವ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.
ಆಟೋರಿಕ್ಷಾ ವಾಹನಗಳ ನಿಲುಗಡೆಗಾಗಿ ಹನೂರು ತಾಲ್ಲೂಕು ಕೌದಳ್ಳಿ ಗ್ರಾಮದಲ್ಲಿ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದ್ದು, ವಾಹನ ಸವಾರರು ಶ್ರೀ ಮಲೈ ಮಹದೇಶ್ವರ ಬೆಟ್ಟಕ್ಕೆ ಹೋಗಲು ನಿಗದಿತ ದರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿರುತ್ತದೆ, ಭಕ್ತರು ಸಹಕರಿಸುವಂತೆ ಪ್ರಕಟಣೆ ಹೊರಡಿಸಲಾಗಿದೆ.