ಬೆಂಗಳೂರು: ಕೆ.ಆರ್.ಪುರದಿಂದ ಬೈಯ ಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟ ವರೆಗಿನ ಮೆಟ್ರೋ ಮಾರ್ಗದಲ್ಲಿ ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ ಯಲ್ಲಿ ನಾಳೆ ಭಾನುವಾರ ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಮೈಸೂರು ರಸ್ತೆಯಿಂದ ಕೆಂಗೇರಿ, ಬೈಯ ಪ್ಪನಹಳ್ಳಿಯಿಂದ ಸ್ವಾಮಿ ವಿವೇಕಾನಂದ ರಸ್ತೆ ಹಾಗೂ ವೈಟ್ಫೀಲ್ಡ್ (ಕಾಡುಗುಡಿ)ನಿಂದ ಕೆ.ಆರ್.ಪುರ ನಿಲ್ದಾಣದವರೆಗೆ ಬೆಳಗ್ಗೆ 7ರಿಂದಮಧ್ಯಾಹ್ನ 1 ರವರೆಗೆರೈಲುಸಂಚಾರ ಸ್ಥಗಿತಗೊಳ್ಳಲಿದೆ.
ಮಧ್ಯಾಹ್ನ 1 ಗಂಟೆ ನಂತರ ಎಲ್ಲ ಮಾರ್ಗ ದಲ್ಲೂ ಎಂದಿನಂತೆ ಮೆಟ್ರೋ ರೈಲು ಸೇವೆ ನೀಡಲಾಗುತ್ತದೆ. ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಮೆಟ್ರೋ ಪ್ರಕಟಣೆ ಹೊರಡಿಸಿದೆ.