alex Certify ‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಫೆ.11 ರಂದು ಈ ಮಾರ್ಗದಲ್ಲಿ ಸಂಚಾರ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನಮ್ಮ ಮೆಟ್ರೋ’ ಪ್ರಯಾಣಿಕರ ಗಮನಕ್ಕೆ : ಫೆ.11 ರಂದು ಈ ಮಾರ್ಗದಲ್ಲಿ ಸಂಚಾರ ಸ್ಥಗಿತ

ಬೆಂಗಳೂರು : ಫೆ.11 ರಂದು ಬೆಂಗಳೂರಿನ ಈ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಲಿದೆ ಎಂದು ಬಿಎಂಆರ್‘ಸಿಎಲ್ ಪ್ರಕಟಣೆ ಹೊರಡಿಸಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮವು ದಿನಾಂಕ 11.02.2024 ರಂದು (ಭಾನುವಾರ) ಟ್ರಿನಿಟಿ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಿದೆ. ಈ ಕಾಮಗಾರಿಯನ್ನು ನಿರ್ವಹಿಸಲು ನೇರಳೆ ಮಾರ್ಗದ ಎಂ.ಜಿ. ರಸ್ತೆ ಮತ್ತು ಇಂದಿರಾನಗರ ಮೆಟ್ರೋ ನಿಲ್ದಾಣಗಳನಡುವೆ ವಾಣಿಜ್ಯ ಸೇವೆಯನ್ನು ಬೆಳಿಗ್ಗೆ 07.00 ಗಂಟೆಯಿಂದ 9.00 ಗಂಟೆಯವರೆಗೆ (ಎರಡು ಗಂಟೆಗಳ ಅವಧಿಗೆ) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಅವಧಿಯಲ್ಲಿ ರೈಲುಗಳು ಎಂ.ಜಿ ರಸ್ತೆ ಮತ್ತು ಚಲ್ಲಘಟ್ಟ ಹಾಗೂ ಇಂದಿರಾನಗರ ಮತ್ತು ವೈಟ್ಫೀಲ್ಡ್ (ಕಾಡುಗೋಡಿ) ನಡುವೆ ಮಾತ್ರ ಬೆಳಿಗ್ಗೆ 07.00 ಗಂಟೆಯಿಂದ ಚಲಿಸುತ್ತವೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದೆ .

ಬೆಳಿಗ್ಗೆ 9.00 ಗಂಟೆಯ ನಂತರ ವೈಟ್ಫೀಲ್ಡ್ ಮತ್ತು ಚಲ್ಲಘಟ್ಟ ಮೆಟ್ರೋ ನಿಲ್ದಾಣಗಳ ನಡುವಿನ ಸಂಪೂರ್ಣ ನೇರಳೆ ಮಾರ್ಗದಲ್ಲಿ ವೇಳಾಪಟ್ಟಿಯಂತೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತವೆ ಎಂದು ತಿಳಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...