ಬೆಂಗಳೂರು : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಗೆ ಅರ್ಜಿ ಸಲ್ಲಿಸಲು ಆ.9ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.
ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2023) ಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ದಿನಾಂಕ:14/07/2023 ರಿಂದ 05/08/2023 ಕಾಲಾವಕಾಶ ನೀಡಲಾಗಿತ್ತು. ಅಭ್ಯರ್ಥಿಗಳು ನಿಗದಿತ ಶುಲ್ಕಪಾವತಿಯೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು 09/08/2023 ರವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ www.schooleducation.kar.nic.in ನ್ನು ಸಂಪರ್ಕಿಸಲು ತಿಳಿಸಿದೆ ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವೆಬ್ಸೈಟ್ನಲ್ಲಿ ನೀಡಲಾದ ಸೂಚನೆಗಳನ್ನು ಡೌನ್ ಲೋಡ್ ಮಾಡಿಕೊಂಡು, ಕೂಲಂಕಷವಾಗಿ ಓದಿ ಅರ್ಥೈಸಿಕೊಂಡು, ಅದರಂತೆ ಸೂಕ್ತ ಸಿದ್ಧತೆಯೊಂದಿಗೆ ಆನ್ ಲೈನ್ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್ಸೈಟ್ www.schooleducation.kar.nic.in ಭೇಟಿ ನೀಡಲು ತಿಳಿಸಿದೆ.