ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಹೀಟ್ ವೇವ್ ಸ್ಟ್ರೋಕ್ ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ. ಆದ್ದರಿಂದ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಲಹೆಗಳನ್ನು ನೀಡಿದೆ.
ಬಿಸಿಲ ಬೇಗೆಗೆ ದೇಹದ ಬಗೆಗಿರಲಿ ವಿಶೇಷ ಕಾಳಜಿ
1) ಆಯಾಸವಾದಾಗ ಮಾತ್ರವಲ್ಲ, ಆಗಾಗ ನೀರು ಕುಡಿಯುತ್ತಲೇ ಇರಿ.
2) ಲಿಂಬೆ ಜ್ಯೂಸ್, ಮಜ್ಜಿಗೆ, ಲಸ್ಸಿ, ಹಣ್ಣಿನ ರಸಗಳನ್ನು ಹೆಚ್ಚು ಕುಡಿಯಿರಿ.
3)ಪ್ರಯಾಣದ ಸಮಯದಲ್ಲಿ ನೀರಿನ ಬಾಟಲ್ಗಳನ್ನು ಬ್ಯಾಗ್ನಲ್ಲಿ ಇರಿಸಿಕೊಳ್ಳಿ.
4) ನೀರಿನಂಶವಿರುವ, ಕಲ್ಲಂಗಡಿ, ಕಿತ್ತಳೆ, ಮೂಸಂಬಿ, ದ್ರಾಕ್ಷಿ, ಅನಾನಸ್ ಹಣ್ಣುಗಳನ್ನು ಸೇವಿಸಿ
* ಬೆಳಿಗ್ಗೆ 11 ರಿಂದ ಸಂಜೆ 04 ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿ.
ಸಾಕಷ್ಟು ನೀರು ಕುಡಿಯಿರಿ, ಮಜ್ಜಿಗೆ ಮತ್ತು ಗ್ರೂಕೋಸ್ / (ಓ.ಆರ್.ಎಸ್.) ನಂತಹ ದ್ರವ
ಪದಾರ್ಥ ಗಳನ್ನು ಹೆಚ್ಚು ಉಪಯೋಗಿಸಿ.
* ಬೇಸಿಗೆಯಲ್ಲಿ ಹೊರಗಿನಿಂದ ಬಂದ ತಕ್ಷಣ ನೀರು/ ಓ.ಆರ್.ಎಸ್ /ಮಜ್ಜಿಗೆಯಂತಹ ಪಾನೀಯಗಳನ್ನು ಬಳಸಬೇಕು.
* ಹೀಟ್ ಸ್ಟೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ, ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಟ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು, ವ್ಯಕ್ತಿಗೆ ತಣ್ಣೀರಿನಿಂದ ಫ್ರಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಬ್ಲಾಕ್ಗಳ ಮಧ್ಯ ಇಡಬಹುದು.