alex Certify ಸಾರ್ವಜನಿಕರ ಗಮನಕ್ಕೆ : ಸರ್ಕಾರದ ಈ 6 ಮಾನದಂಡ ಮೀರಿದ್ರೆ ರದ್ದಾಗುತ್ತೆ ‘BPL’ ಕಾರ್ಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರ ಗಮನಕ್ಕೆ : ಸರ್ಕಾರದ ಈ 6 ಮಾನದಂಡ ಮೀರಿದ್ರೆ ರದ್ದಾಗುತ್ತೆ ‘BPL’ ಕಾರ್ಡ್

7ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೆರವಾಗಲು ಸರ್ಕಾರಗಳು ಬಿಪಿಎಲ್ ಕಾರ್ಡ್ ಮೂಲಕ ಪಡಿತರ ವಿತರಣೆ ಮಾಡುತ್ತಿದೆ. ಆದರೆ ಕೆಲವರು ತಾವು ಅನುಕೂಲ ಸ್ಥಿತಿಯಲ್ಲಿದ್ದರೂ ಸಹ ಸುಳ್ಳು ಮಾಹಿತಿ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆಯುತ್ತಿದ್ದು, ಅಂತಹ ಕಾರ್ಡುಗಳನ್ನು ರದ್ದು ಮಾಡಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ.

ಜೀವನೋಪಾಯಕ್ಕೆ ಟ್ಯಾಕ್ಸಿಯಾಗಿ ವಾಹನ ಹೊಂದಿರುವವರನ್ನು ಹೊರತುಪಡಿಸಿ ಸ್ವಂತ ಬಳಕೆಗೆ ನಾಲ್ಕು ಚಕ್ರ ವಾಹನಗಳನ್ನು ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯಲು ಅನರ್ಹರು ಎಂದು ಪರಿಗಣಿಸಲಾಗಿದ್ದು, ಇದೀಗ ಇಂತಹ ವಾಹನಗಳ ಮಾಹಿತಿ ನೀಡುವಂತೆ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳಿಗೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿದುಬಂದಿದೆ.

ಅಲ್ಲದೆ ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಸಾರ್ವಜನಿಕ ವಲಯದ ಸಂಸ್ಥೆಗಳು ಅಥವಾ ಸರ್ಕಾರದ ನೆರವಿನ ಸ್ವಾಯತ್ತ ಸಂಸ್ಥೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವವರು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಗಿಂತ ಅಧಿಕ ಭೂಮಿ ಹೊಂದಿರುವ ಕುಟುಂಬಗಳು ಹಾಗೂ 1.2 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆಯಲು ಅನರ್ಹರು ಎಂದು ಪರಿಗಣಿಸಲಾಗಿದ್ದು, ಇದನ್ನು ಪರಿಶೀಲಿಸಿ ಅಂಥವರ ಕಾರ್ಡ್ ರದ್ದುಗೊಳಿಸಲು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಒಂದು ಸುಳ್ಳು ದಾಖಲೆಗಳನ್ನು ನೀಡಿ ಅಕ್ರಮವಾಗಿ ಕಾರ್ಡ್ ಪಡೆದಿದ್ದರೆ ಅಂತಹವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡು ದಂಡ ಕೂಡ ವಿಧಿಸಲಿದೆ.

ಮಾನದಂಡಗಳು

1) ವಾರ್ಷಿಕ ಆದಾಯ 1.2 ಲಕ್ಷ ಹೊಂದಿರುವ ಕುಟುಂಬಗಳು
2) 3 ಹೆಕ್ಟರಿಗಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿರುವ ಕುಟುಂಬಗಳು
3) ವೈಟ್ ಬೋರ್ಡ್ ಕಾರ್ ಹೊಂದಿರುವ ಕುಟುಂಬಗಳು
4) ನಗರ ಪ್ರದೇಶಗಳಲ್ಲಿ 1000 Sq.ft ಗಿಂತ ಹೆಚ್ಚಿನ ವಿಸ್ತೀರ್ಣದ ಮನೆ ಹೊಂದಿದ್ದರೆ ಬಿಪಿಎಲ್ ಕಾರ್ಡ್ ಇಲ್ಲ
5) ಕುಟುಂಬಸ್ಥರಲ್ಲಿ ಯಾರಾದರೂ ಸರ್ಕಾರಿ ನೌಕರಿಯಲ್ಲಿದ್ದರೆ ಬಿಪಿಎಲ್ ಕಾರ್ಡ್ ಇಲ್ಲ
6) ವಾಣಿಜ್ಯ ತೆರಿಗೆ, ಆದಾಯ ತೆರಿಗೆ, ಐಟಿ ರಿಟರ್ನ್ ಸಲ್ಲಿಸುವ ಕುಟುಂಬಗಳು BPL ಕಾರ್ಡ್ ಹೊಂದಿದ್ದರೆ ಅವುಗಳು ರದ್ದಾಗಲಿವೆ.
ಆಹಾರ ಇಲಾಖೆಯು 6 ಮಾನದಂಡದ ಆಧಾರದ ಮೇಲೆ ಸಮೀಕ್ಷೆ ಕಾರ್ಯ ನಡೆಸಲಿದ್ದು, ಇದರ ವ್ಯಾಪ್ತಿಗೆ ಬಂದವರ ಬಿಪಿಎಲ್ ಕಾರ್ಡ್ ರದ್ದು ಮಾಡಲಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸುಮಾರು 10 ಲಕ್ಷಕ್ಕೂ ಕಾರ್ಡ್ಗಳು ರದ್ದಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...