alex Certify ಪ್ರಯಾಣಿಕರ ಗಮನಕ್ಕೆ : ನಾಳೆ ಈ ಭಾಗದಲ್ಲಿ ‘KSRTC’ ಬಸ್ ಸಂಚಾರದಲ್ಲಿ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರ ಗಮನಕ್ಕೆ : ನಾಳೆ ಈ ಭಾಗದಲ್ಲಿ ‘KSRTC’ ಬಸ್ ಸಂಚಾರದಲ್ಲಿ ವ್ಯತ್ಯಯ

ಮಡಿಕೇರಿ : ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ಸಲುವಾಗಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ಗಳನ್ನು ನೀಡುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಆಗಸ್ಟ್, 30 ರಂದು ಈ ಸೌಲಭ್ಯ ವಿತರಣೆಯನ್ನು ಫಲಾನುಭವಿಯ ಖಾತೆಗೆ ಡಿಬಿಟಿ ಮೂಲಕ ವರ್ಗಾವಣೆ ಮಾಡುವ ಪ್ರಕ್ರಿಯೆಯನ್ನು ಜಾರಿಗೊಳಿಸುವ ಕಾರ್ಯಕ್ರಮ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲೆ ಮಾತ್ರವಲ್ಲದೆ ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ಫಲಾನುಭವಿಗಳು ಕೂಡಾ ಸಮಾವೇಶಗೊಳ್ಳಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲಾ ಅರ್ಹ ಫಲಾನುಭವಿಗಳ ಅನುಕೂಲಕ್ಕಾಗಿ ನಿಗಮದಿಂದ ಸುಮಾರು 103 ಬಸ್ಸುಗಳನ್ನು ಒಪ್ಪಂದದ ಮೇರೆಗೆ ಕಾರ್ಯಾಚರಣೆ ಮಾಡಲು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅವರಿಂದ ಕೋರಿಕೆ ಬಂದಿದೆ. ಅದರಂತೆ ನಿಗಮದ ಬಸ್ಸುಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಆದ್ದರಿಂದ ಆಗಸ್ಟ್, 30 ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಮಡಿಕೇರಿ, ವಿರಾಜಪೇಟೆ, ಕುಶಾಲನಗರ, ಸೋಮವಾರಪೇಟೆ, ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ನಿಗಮದ ಸಾರಿಗೆ ಬಸ್ಸುಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗುತ್ತದೆ. ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಕರಾರಸಾ ನಿಗಮದೊಂದಿಗೆ ಸಹಕರಿಸುವಂತೆ ಕ.ರಾ.ರ.ಸಾ.ನಿ.ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ಅವರು ಕೋರಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...