alex Certify ವಾಹನ ಸವಾರರ ಗಮನಕ್ಕೆ : ಸೆ.28 ರಂದು ಶಿವಮೊಗ್ಗದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ , ಇಲ್ಲಿದೆ ಪರ್ಯಾಯ ಮಾರ್ಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರ ಗಮನಕ್ಕೆ : ಸೆ.28 ರಂದು ಶಿವಮೊಗ್ಗದ ಈ ರಸ್ತೆಗಳಲ್ಲಿ ಸಂಚಾರ ನಿರ್ಬಂಧ , ಇಲ್ಲಿದೆ ಪರ್ಯಾಯ ಮಾರ್ಗ

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.28 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಘೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಹೊರಡಿಸಿದ್ದಾರೆ.

ಸೆ.28 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧೀ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ ಮುಖಾಂತರ ಎ.ಎ ಸರ್ಕಲ್, ನೆಹರು ರಸ್ತೆ ಮುಖಾಂತರವಾಗಿ ಗೋಪಿ ಸರ್ಕಲ್, ದುರ್ಗಿಗುಡಿ ಮುಖ್ಯ ರಸ್ತೆಯಿಂದ ಜೈಲ್ ಸರ್ಕಲ್, ಕುವೆಂಪು ರಸ್ತೆ ಮಾರ್ಗವಾಗಿ ಶಿವಮೂರ್ತಿ ಸರ್ಕಲ್, ಸವಳಂಗ ಮುಖ್ಯ ರಸ್ತೆ ಮಾರ್ಗವಾಗಿ ಮಹಾವೀರ್ ಸರ್ಕಲ್, ಡಿ.ವಿ.ಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಬಿ.ಹೆಚ್ ರಸ್ತೆ, ಪೊಲೀಸ್ ಕಾರ್ನರ್, ಕೋಟೆ ಪೊಲೀಸ್ ಠಾಣೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದಿಂದ ಸಾಗಿ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು.

• ಮೇಲ್ಕಂಡ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆ ನಿಷೇಧಿಸಿದೆ.

• ಭದ್ರಾವತಿ, ಬೆಂಗಳೂರು ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಬಸ್‍ಗಳು ಎಂ.ಆರ್.ಎಸ್ ಸರ್ಕಲ್ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

• ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್‍ಗಳು ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

• ಹೊನ್ನಾಳಿ, ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋದುವ ಎಲ್ಲಾ ಭಾರೀ ವಾಹನಗಳು ಮತ್ತು ಬಸ್‍ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

• ಕೋಟೆ ರಸ್ತೆ ಮತ್ತು ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು.

• ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಹೋಗುವ ಎಲ್ಲಾ ಬಸ್‍ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್, ಆಲ್ಕೊಳ ಸರ್ಕಲ್, ಪೊಲೀಸ್ ಚೌಕಿ, ರಾಜ್ ಕುಮಾರ್ ಸರ್ಕಲ್, ಬೊಮ್ಮನಕಟ್ಟೆ ಮುಖಾಂತರವಾಗಿ ಸವಳಂಗ ರಸ್ತೆಗೆ ಹೋಗುವುದು.

• ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆಯ ಮುಖಾಂತರ ಎಂ.ಆರ್.ಎಸ್ ಸರ್ಕಲ್ ಕಡೆಗೆ ಹೋಗುವುದು.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...