ಬೆಂಗಳೂರು : ಆಸ್ತಿ ಮಾಲೀಕರ ಗಮನಕ್ಕೆ…ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ (OTS) ಯೋಜನೆಯು ಇದೇ ತಿಂಗಳು ಜುಲೈ 31ಕ್ಕೆ ಮುಕ್ತಾಯಗೊಳ್ಳಲಿದೆ. ಈ ಯೋಜನೆ ಅಡಿಯಲ್ಲಿ ಬಾಕಿ ಇರುವ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುತ್ತಿದೆ. ಬೆಂಗಳೂರಿನ ನಾಗರಿಕರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ.
ಆನ್ಲೈನ್ ಮೂಲಕ ಪಾವತಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ(https://bbmptax.karnataka.gov.in/
ಆಸ್ತಿ ತೆರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬ ಬಗ್ಗೆ ಗೊಂದಲಗಳಿದ್ದಲ್ಲಿ ಸಹಾಯವಾಣಿ 1533 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ಹೊರಡಿಸಿದೆ.
ಈ ಸುವರ್ಣಾವಕಾಶವು 31ನೇ ಜುಲೈ 2024 ರಂದು ಕೊನೆಗೊಳ್ಳಲಿದೆ. ಜೀವಮಾನದಲ್ಲಿ ಒಮ್ಮೆ ಮಾತ್ರ ಈ ಯೋಜನೆಯ ಅವಕಾಶವಿದ್ದು, ಇದರ ವಿಸ್ತರಣೆ ಇರುವುದಿಲ್ಲ. ಇಲ್ಲಿಯವರೆಗೆ 4 ಲಕ್ಷ ಆಸ್ತಿವಾರಸುದಾರರ ಪೈಕಿ ಸುಮಾರು 50000 ಜನರು ಮಾತ್ರ ಈ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ನಿಮ್ಮ ಸ್ವತ್ತಿನ ಬಾಕಿ ಆಸ್ತಿತೆರಿಗೆಯನ್ನು ಪಾವತಿಸಬೇಕೆಂದು ಕೋರುತ್ತೇನೆ. ಬಿಬಿಎಂಪಿ ಕಾಯ್ದೆಯಲ್ಲಿ ಆಸ್ತಿತೆರಿಗೆ ಬಾಕಿ ವಸೂಲಾತಿಗೆ ಅವಕಾಶವಿದೆ. ಆದಾಗ್ಯೂ, ಒಟಿಎಸ್ ನಾಗರಿಕರಿಗೆ ಸಹಾಯ ಮಾಡಲು ಸರ್ಕಾರ ಮತ್ತು ಬಿಬಿಎಂಪಿಯೂ ಜೊತೆಯಾಗಿ ಕಾರ್ಯನಿರ್ವಹಿಸಲಿದೆ .ನಾಗರಿಕರು https://bbmptax.karnataka.gov.in ಮೂಲಕ ಆನ್ಲೈನ್ ನಲ್ಲಿ ಆಸ್ತಿತೆರಿಗೆಯನ್ನು ಸುಲಭವಾಗಿ ಪಾವತಿಸಬಹುದು. ಒಟಿಎಸ್ ಪ್ರಕಾರ ಆಸ್ತಿ ತೆರಿಗೆ ಬಾಕಿಗಳನ್ನು ಈಗಾಗಲೇ ಕಡಿಮೆ ಮಾಡಲಾಗಿದ್ದು, ಆಗಸ್ಟ್ 1, 2024 ರಿಂದ ಹೆಚ್ಚಾಗಲಿದೆ.