ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರು ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆಯನ್ನು ದಂಡ ಹಾಗೂ ಬಡ್ಡಿ ಇಲ್ಲದೆ ಪಾವತಿಸುವ ಒಂದು ಬಾರಿ ಪರಿಹಾರ (ಒಟಿಎಸ್) ಯೋಜನೆಯನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
(OTS) ಯೋಜನೆಯ ಜುಲೈ 31ಕ್ಕೆ ಮುಕ್ತಾಯಗೊಳ್ಳಲಿತ್ತು. ಆದರೆ ಇನ್ನೂ ಹಲವಾರು ಮಂದಿ ಆಸ್ತಿ ತೆರಿಗೆ ಪಾವತಿಸಿದ ಹಿನ್ನೆಲೆ OTS) ಯೋಜನೆಯ ಕಾಲಾವಕಾಶ 1 ತಿಂಗಳು ಅಂದರೆ ಆಗಸ್ಟ್ 31 ರವರೆಗೆ ವಿಸ್ತರಣೆ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದೀಗ ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಸ್ತಿ ತೆರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬ ಬಗ್ಗೆ ಗೊಂದಲಗಳಿದ್ದಲ್ಲಿ ಸಹಾಯವಾಣಿ 1533 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಬಿಬಿಎಂಪಿ ಕಾಯ್ದೆಯಲ್ಲಿ ಆಸ್ತಿತೆರಿಗೆ ಬಾಕಿ ವಸೂಲಾತಿಗೆ ಅವಕಾಶವಿದೆ. ಆದಾಗ್ಯೂ, ಒಟಿಎಸ್ ನಾಗರಿಕರಿಗೆ ಸಹಾಯ ಮಾಡಲು ಸರ್ಕಾರ ಮತ್ತು ಬಿಬಿಎಂಪಿಯೂ ಜೊತೆಯಾಗಿ ಕಾರ್ಯನಿರ್ವಹಿಸಲಿದೆ .ನಾಗರಿಕರು https://bbmptax.karnataka.gov.in ಮೂಲಕ ಆನ್ಲೈನ್ ನಲ್ಲಿ ಆಸ್ತಿತೆರಿಗೆಯನ್ನು ಸುಲಭವಾಗಿ ಪಾವತಿಸಬಹುದು.