alex Certify ಗಮನಿಸಿ : ಪರಿಸರ ಸ್ನೇಹಿ ‘ಗಣೇಶ ಚತುರ್ಥಿ’ ಆಚರಣೆಗೆ ಸೂಚನೆ : ಈ ನಿಯಮಗಳ ಪಾಲನೆ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಪರಿಸರ ಸ್ನೇಹಿ ‘ಗಣೇಶ ಚತುರ್ಥಿ’ ಆಚರಣೆಗೆ ಸೂಚನೆ : ಈ ನಿಯಮಗಳ ಪಾಲನೆ ಕಡ್ಡಾಯ

ಸೆಪ್ಟೆಂಬರ್ 18 ರಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗು ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದ ಜಲಮೂಲಗಳು ಕಲುಷಿತಗೊಂಡು ಪರಿಸರಕ್ಕೆ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆ ಉಂಟಾಗುವುದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ.

ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕೆಲವು ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ತಿಳಿಸಿದೆ.
ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಎ) ಅನ್ವಯ ರಾಜ್ಯದ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐಪಿಸಿ ಸೆಕ್ಷನ್ 1860ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು.

ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣ ರಹಿತ ಮಣ್ಣಿನ/ ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ. ನಂತರ ಗೌರಿ ಗಣೇಶ ಮೂರ್ತಿಗಳನ್ನು ಅವರವರ ಮನೆಗಳಲ್ಲಿಯೇ ಅಥವಾ ನಗರಸಭೆ/ ಪುರಸಭೆ / ಪಟ್ಟಣ ಪಂಚಾಯಿತಿ ವತಿಯಿಂದ ನಿಗಧಿಪಡಿಸಲಾಗುವ ಸ್ಥಳಗಳಲ್ಲಿ ಮಾತ್ರವೇ ವಿಸರ್ಜಿಸಬೇಕು.
ಗೌರಿ-ಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂ, ಹಣ್ಣೂ, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ನಗರಸಭೆ/ ಪುರಸಭೆ / ಪಟ್ಟಣ ಪಂಚಾಯ್ತಿಯಿಂದ ವ್ಯವಸ್ಥೆ ಮಾಡಿರುವ ಕಸ ಸಂಗ್ರಹಣ ವಾಹನಕ್ಕೆ ನೀಡುವುದು. ಶಬ್ದ ಮಾಲಿನ್ಯ (ನಿರ್ಬಂಧ ಮತ್ತು ನಿಯಂತ್ರಣ)ನಿಯಮಗಳು 2000ರ ನಿಬಂಧನೆಗಳನ್ನು ಗಣೇಶ ಪೆಂಡಾಲ್ಗಳಲ್ಲಿ ಅನುಸರಿಸಬೇಕು.

ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್ಗಳನ್ನು ನಿರ್ಮಿಸುವಲ್ಲಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವುದು ಹಾಗೂ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು. ರಾಜ್ಯದಲ್ಲಿ ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಯಾವುದೇ ಕಾರಣಕ್ಕೂ ಬಳಸದೇ ಇರುವುದು ಮತ್ತು ಬಳಸಿದ್ದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು.ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗುಗಳನ್ನು (Including compostable, biodegradable and non woven sacks irrespective of size and thickness) ಬಳಸದೇ ಇರುವುದು ಮತ್ತು ಬಳಸಿದ್ದಲ್ಲಿ ಸೂಕ್ತ ದಂಡವನ್ನು ಸ್ಥಳೀಯ ಸಂಸ್ಥೆಗಳ ಮೂಲಕ ವಿಧಿಸಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...