ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಹಿರಿಯ ನಾಗರೀಕರ ಮನರಂಜನಾ ಹಾಗೂ ಕ್ಷೇಮಾಭಿವೃದ್ಧಿ ಸಂಘವು ಚಂದ್ರಗಿರಿ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಇವರ ಸಂಯುಕ್ತಾಶ್ರಯದಲ್ಲಿ 2024ರ ಜನವರಿ ತಿಂಗಳಿನಲ್ಲಿ ಉಚಿತ ಮೆಗಾ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದ್ದು, ಡಿ. 28 ರಂದು ಮಧ್ಯಾಹ್ನ 12.00ಕ್ಕೆ ನಗರದ ಚಂದ್ರಗಿರಿ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಆವರಣದಲ್ಲಿ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಡಾ|| ಪ್ರಭುಲಿಂಗ ವೈ. ಕೊಣ್ಣೂರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಯನಗರ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಂ. ಸಿದ್ದೇಗೌಡರು ಭಾಗವಹಿಸಲಿದ್ದಾರೆ.ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗೆ ಮೊ.ಸಂ.: 9448814467/9980219956/ 9946728062 ಗಳನ್ನು ದಿ: 01/01/2024 ರಿಂದ 15/01/2024ರವರೆಗೆ ಮ. 1.00 ರೊಳಗಾಗಿ ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.