ಬೆಂಗಳೂರು : ಸಾರ್ವಜನಿಕರೇ ಗಮನಿಸಿ… ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ಸಿಎಂ ಸಿದ್ದರಾಮಯ್ಯರ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ @osd_cmkarnataka `ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಬಹುದಾಗಿದೆ.
ಜನರ ಸಮಸ್ಯೆಗೆ ಪರಿಹಾರ
ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಬಾಳಂಬೀಡ ಗ್ರಾಮದ 2ನೇ ವಾರ್ಡ್ ನಿವಾಸಿಗಳು ನೀರಿನ ಸಮಸ್ಯೆ ಎದುರಿಸುತ್ತಿರುವುದರ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಈ ಬಗ್ಗೆ ಪರಿಶೀಲಿಸಿದ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಅಗತ್ಯ ಕ್ರಮ ಕೈಗೊಂಡಿರುತ್ತಾರೆ.
ಅದರನ್ವಯ ಬಾಳಂಬೀಡ ಗ್ರಾಮದಲ್ಲಿ ಈಗಾಗಲೇ ಹೊಸದಾಗಿ ಕೊಳವೆ ಬಾವಿಯನ್ನು ಕೊರೆದು ಪೈಪ್ಲೈನ್ ಜೋಡಿಸಿ, ಅದರೊಂದಿಗೆ ಮೂರು ಖಾಸಗಿ ಕೊಳವೆ ಬಾವಿಗಳನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ಪಡೆದು ಗ್ರಾಮದ ಜನರಿಗೆ, ಜಾನುವಾರುಗಳಿಗೆ ಕುಡಿಯುವ ನೀರನ್ನು ನಿಯಮಿತವಾಗಿ ಪೂರೈಸುವ ಕಾರ್ಯವನ್ನು ಮಾಡಲಾಗಿರುತ್ತದೆ.
ಸಾರ್ವಜನಿಕರೇ ಗಮನಿಸಿ : ನಿಮ್ಮ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ
ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ @osd_cmkarnataka `ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ನಗರಸಭೆಯಲ್ಲಿ ಕಸ ವಿಲೇವಾರಿ ಹಾಗೂ ಕಸ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ. ನಗರದ ಹಲವಾರು ಕಡೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಸ ಸಂಗ್ರಹಣೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲಿಸಿದ್ದಾರೆ.
ಇದೀಗ ಸದರಿ ಸ್ಥಳದಲ್ಲಿ ದಿನಂಪ್ರತಿ ಲಭ್ಯವಿರುವ ಪೌರಕಾರ್ಮಿಕರಿಂದ ಕಸ ನಿರ್ವಹಣೆಯನ್ನು ಮಾಡಲಾಗುತ್ತಿದೆ. ಶ್ರೀ ಸಿದ್ದರಾಮೇಶ್ವರ ದೇವಸ್ಥಾನದ ಹತ್ತಿರ ಸ್ಥಳದಲ್ಲಿ ಯಾವುದೇ ಕಸ ಬೀಳದಂತೆ ಎಚ್ಚರ ವಹಿಸಲಾಗುತ್ತಿದ್ದು, ಸ್ಥಳವು ಕಸಮುಕ್ತವಾಗಿದೆ. ನಗರಸಭೆ ವತಿಯಿಂದ ದಿನನಿತ್ಯ ಸ್ವಚ್ಛಗೊಳಿಸಲಾಗುತ್ತಿದೆ. ಜೊತೆಗೆ ʼಸಾರ್ವಜನಿಕರು ಕಸವನ್ನು ಎಸೆಯಬಾರದು, ಕಸವನ್ನು ಹಾಕಿದ್ದಲ್ಲಿ ದಂಡ ವಿಧಿಸಲಾಗುವುದುʼ ಎಂಬ ಎಚ್ಚರಿಕೆಯುಳ್ಳ ಬ್ಯಾನರ್ ಹಾಕಿಸಲಾಗಿದೆ.