ಬೆಂಗಳೂರು : ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾ..? ನೀವು ಏನು ಮಾಡಬೇಕು..? ಹೇಗೆ ದೂರು ನೀಡಬೇಕು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.
ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಸಿಎಂ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ @osd_cmkarnataka ʼಎಕ್ಸ್ʼ ಖಾತೆಗೆ ಟ್ಯಾಗ್ ಮಾಡಬಹುದಾಗಿದೆ.
ಬೆಂಗಳೂರಿನ ಬೆಳ್ಳಂದೂರು ಹರ್ಲೂರ್ ರಸ್ತೆಯ ಬಳಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದಾಗಿ ಅಲ್ಲಿನ ಸ್ಥಳೀಯ ನಿವಾಸಿಯೊಬ್ಬರು ಇ-ಮೇಲ್ ಮೂಲಕ ಮುಖ್ಯಮಂತ್ರಿಗಳ ಕುಂದುಕೊರತೆ ವಿಭಾಗಕ್ಕೆ ದೂರು ನೀಡಿರುತ್ತಾರೆ. ಈ ದೂರನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ರಕ್ಷಣಾ ತಂಡವು ಕಾರ್ಯಾಚರಣೆ ನಡೆಸಿದ್ದು, 10 ನಿಮಿಷದಲ್ಲಿ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತು. ಈ ಸಂಬಂಧ ಹರ್ಷ ವ್ಯಕ್ತಪಡಿಸಿದ ಸ್ಥಳೀಯ ನಿವಾಸಿಗಳು ಮುಖ್ಯಮಂತ್ರಿಯ ಕುಂದುಕೊರತೆ ವಿಭಾಗದ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಕಲಬುರಗಿ ನಗರದ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ರಮವಾಗಿ ಡಿಟರ್ಜೆಂಟ್ ಸೋಪ್ ಹಾಗೂ ವಾಷಿಂಗ್ ಪೌಡರ್ ಮಾರಾಟ ಮಾಡುತ್ತಿರುವುದಾಗಿ ಇ-ಮೇಲ್ ಬಳಕೆದಾರರೊಬ್ಬರು ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗಕ್ಕೆ ದೂರು ನೀಡಿರುತ್ತಾರೆ. ಈ ಬಗ್ಗೆ ತಕ್ಷಣವೇ ಸ್ಪಂದಿಸಿದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಅದರಂತೆ, ಆಹಾರ ನಿರೀಕ್ಷಕರು ದೂರುದಾರರಿಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿರುವುದಿಲ್ಲ. ವಿಚಾರಣೆಯ ಸಮಯದಲ್ಲೂ ಹಾಜರಿರುವುದಿಲ್ಲ. ಈ ಬಗ್ಗೆ ಪಡಿತರ ಚೀಟಿದಾರರಲ್ಲಿ ವಿಚಾರಿಸಲಾಗಿದ್ದು, ನ್ಯಾಯಬೆಲೆ ಅಂಗಡಿ ವರ್ತಕರ ವಿರುದ್ಧ ದೂರುದಾರರು ಸುಳ್ಳು ಆರೋಪ ಮಾಡಿರುವುದಾಗಿ ತಿಳಿದು ಬಂದಿರುತ್ತದೆ. ಮುಂದುವರೆದು ಸದರಿ ನ್ಯಾಯಬೆಲೆ ಅಂಗಡಿಯಿಂದ ಅಕ್ರಮವಾಗಿ ಯಾವುದೇ ಡಿಟರ್ಜೆಂಟ್ ಸೋಪ್ ಹಾಗೂ ವಾಷಿಂಗ್ ಪೌಡರ್ ಮಾರಾಟವಾಗಿರುವುದಿಲ್ಲ ಎಂದು ಕಲಬುರಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ಬೆಂಗಳೂರಿನ ಬೆಳ್ಳಂದೂರು ಹರ್ಲೂರ್ ರಸ್ತೆಯ ಬಳಿ ಮಂಗಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದಾಗಿ ಅಲ್ಲಿನ ಸ್ಥಳೀಯ ನಿವಾಸಿಯೊಬ್ಬರು ಇ-ಮೇಲ್ ಮೂಲಕ ಮುಖ್ಯಮಂತ್ರಿಗಳ ಕುಂದುಕೊರತೆ ವಿಭಾಗಕ್ಕೆ ದೂರು ನೀಡಿರುತ್ತಾರೆ. ಈ ದೂರನ್ನು ಗಮನಿಸಿದ ಮುಖ್ಯಮಂತ್ರಿಗಳ… pic.twitter.com/K1gdnr0AdP
— DIPR Karnataka (@KarnatakaVarthe) February 27, 2025