ಬೆಂಗಳೂರು : ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾ..? ನೀವು ಏನು ಮಾಡಬೇಕು..? ಹೇಗೆ ದೂರು ನೀಡಬೇಕು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.
ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ@osd_cmkarnatakaʼಎಕ್ಸ್ʼ ಖಾತೆಗೆ ಟ್ಯಾ ಗ್ ಮಾಡಬಹುದಾಗಿದೆ.
ಸಾರ್ವಜನಿಕರ ಸಮಸ್ಯೆಗೆ ಸಿಎಂ ಸ್ಪಂದನೆ
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕ್ಯಾತಗಾನಗಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಮುಂದುವರೆದು ವರದಿಯಲ್ಲಿ ತಿಳಿಸಲಾಗಿರುವ ಮಾಹಿತಿಯು ಸುಳ್ಳಾಗಿದ್ದು, ಸದರಿ ಗ್ರಾಮದಲ್ಲಿ ಕೊರತೆಗಳು ಇರುವುದಿಲ್ಲ. ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಈಗಾಗಲೇ ಕಲ್ಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸೌಕರ್ಯಗಳನ್ನು ಕಲ್ಪಿಸಲು ಕ್ರಮವಹಿಸಲಾಗುವುದು ಎಂದು ಪಾವಗಡ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕ್ಯಾತಗಾನಗಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವುದಾಗಿ ಮಾಧ್ಯಮದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದು ಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ… pic.twitter.com/IVpmA5qhDR
— DIPR Karnataka (@KarnatakaVarthe) March 10, 2025