ಬೆಂಗಳೂರು : ಇದು ಎಲ್ಲಾ ಪಡಿತರ ಚೀಟಿದಾರರು ಗಮನಿಸಬೇಕಾದ ವಿಚಾರ..ಇನ್ಮುಂದೆ ಈ ಮೂರು ತಪ್ಪು ಮಾಡಿದ್ರೆ ನಿಮ್ಮ ‘ರೇಷನ್ ಕಾರ್ಡ್’ ರದ್ದಾಗುತ್ತದೆ ಜೋಕೆ.
ಹೌದು. ಸರ್ಕಾರ ರಾಜ್ಯದ ಜನತೆಗೆ ಮಹತ್ವದ ಸೂಚನೆ ನೀಡಿದ್ದು, ನೀವು ಪಡಿತರ ಚೀಟಿ ಹೊಂದಿ ಪಡಿತರ ಪಡೆಯದೇ ಇದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತದೆ.
1) ಅಕ್ರಮವಾಗಿ ಅಕ್ಕಿ ಮಾರುವುದು ತಪ್ಪು
ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿ ಮಾರಿಕೊಂಡವರ ವಿರುದ್ಧ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಪ್ರಕರಣ ದಾಖಲು ಮಾಡಲಾಗುತ್ತಿದೆ. ಕಾರ್ಡುದಾರರು ಸರ್ಕಾರದಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡೆಯುವ ಪಡಿತರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ.
2) E-KYC ಮಾಡಿಸದಿದ್ರೆ ನಿಮ್ಮ ರೇಷನ್ ಕಾರ್ಡ್ ರದ್ದು
ಸರ್ಕಾರದ ಪ್ರತಿಯೊಂದು ಯೋಜನೆಗಳ ಸೌಲಭ್ಯ ಪಡೆಯಲು ರೇಷನ್ ಕಾರ್ಡ್ ಬೇಕಾಗಿರುತ್ತದೆ. ರೇಷನ್ ಕಾರ್ಡ್ ಪಡಿತರ ಪಡೆಯಲು ಮಾತ್ರವಲ್ಲದೇ ಗುರುತಿನ ಚೀಟಿ ಪಡೆಯಲು ಕೂಡ ಸಹಕಾರಿಯಾಗುತ್ತದೆ.
ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ.ಇನ್ನೂ ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯಗೊಳಿಸಿದೆ. ಇದಕ್ಕಾಗಿ ಸರ್ಕಾರ ಡಿಸೆಂಬರ್ 30 ರ ತನಕ ಕಾಲಾವಕಾಶ ನೀಡಿದ್ದು, ಇದನ್ನು ಮಾಡಿಸದೇ ಹೋದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.
ಇ-ಕೆವೈಸಿ ಮಾಡಿಸುವುದು ಹೇಗೆ..?
ಮೊದಲಿಗೆ, ಗ್ರಾಹಕರು ತಮ್ಮ ಬ್ಯಾಂಕಿನ ಅಧಿಕೃತ ಪೋರ್ಟಲ್ ಅನ್ನು ತೆರೆಯಬೇಕು ಮತ್ತು ಲಾಗ್ ಇನ್ ಮಾಡಬೇಕು. ಅದರ ನಂತರ, ಕೆವೈಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
– ಸೂಚನೆಗಳನ್ನು ಅನುಸರಿಸಿ ಮತ್ತು ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಇತ್ಯಾದಿಗಳನ್ನು ನಮೂದಿಸಿ.
– ಆಧಾರ್, ಪ್ಯಾನ್ ಮತ್ತು ಇತರ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಂತರ ಅಪ್ಲೋಡ್ ಮಾಡಬೇಕು. ಈ ದಾಖಲೆಗಳನ್ನು ಎರಡೂ ಬದಿಗಳಲ್ಲಿ ಸ್ಕ್ಯಾನ್ ಮಾಡುವುದು ಕಡ್ಡಾಯವಾಗಿದೆ.
– ಪ್ರಕ್ರಿಯೆ ಪೂರ್ಣಗೊಂಡ ನಂತರ, ಸಬ್ಮಿಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಇದು ನಿಮಗೆ ಸೇವಾ ವಿನಂತಿ ಸಂಖ್ಯೆಯನ್ನು ನೀಡುತ್ತದೆ. ಕೆವೈಸಿ ನವೀಕರಣ ಮಾಹಿತಿಯನ್ನು ನಂತರ ಗ್ರಾಹಕರಿಗೆ ಸಂದೇಶ ಅಥವಾ ಮೇಲ್ ಮೂಲಕ ತಿಳಿಸಲಾಗುತ್ತದೆ.
3) 6 ತಿಂಗಳಿಂದ ಪಡಿತರ ಪಡೆಯದವರ ‘ರೇಷನ್ ಕಾರ್ಡ್’ ರದ್ದು
6 ತಿಂಗಳಿನಿಂದ ಪಡಿತರ ಪಡೆಯದವರ ರೇಷನ್ ಕಾರ್ಡ್ ರದ್ದು ಮಾಡಲು ಆಹಾರ ಇಲಾಖೆ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೆಲವರು ಕಳೆದ 6 ತಿಂಗಳಿನಿಂದ ರೇಷನ್ ಪಡೆದಿಲ್ಲ ಎಂಬುದು ತಿಳಿದು ಬಂದಿದ್ದು, ಇಂತಹವರಿಗೆ ಆಹಾರ ಇಲಾಖೆ ಶಾಕ್ ನೀಡಿದ್ದು, ರೇಷನ್ ಪಡೆಯದವರ ರೇಷನ್ ಕಾರ್ಡ್ ಅಮಾನತು ಮಾಡಲು ಆಹಾರ ಇಲಾಖೆ ನಿರ್ಧರಿಸಿದೆ. ಯಾರು ಪ್ರತಿ ತಿಂಗಳು ರೇಷನ್ ಪಡೆಯುದಿಲ್ಲವೋ ಅಂತಹವರ ಕಾರ್ಡ್ ರದ್ದತಿಗೆ ಆಹಾರ ಇಲಾಖೆ ಮುಂದಾಗಿದೆ.