ಶಿವಮೊಗ್ಗ : ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯು 2023-24ನೇ ಸಾಲಿನಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಯೋಜನೆಯಡಿಯಲ್ಲಿ ಬರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಸಾಜಿಸ್ಟ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರುವ 18 ರಿಂದ 35 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು. ತರಬೇತಿ ಅವಧಿ ಎರಡು ತಿಂಗಳಾಗಿದೆ. ಪರಿಶಿಷ್ಟ ಜಾತಿಯ 20 ಫಲಾನುಭವಿಗಳು ಮತ್ತು ಪರಿಶಿಷ್ಟ ಪಂಗಡದ 20 ಫಲಾನುಭವಿಗಳಿಗೆ ಭಾಗವಹಿಸಲು ಅವಕಾಶವಿರುತ್ತದೆ. ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನವಾಗಿರುತ್ತದೆ.
ಅರ್ಜಿಯನ್ನು ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಯ ಕಚೇರಿಯಲ್ಲಿ ನೀಡಲಾಗುವುದು. ತರಬೇತಿ ಅವಧಿಯಲ್ಲಿ ಅರ್ಹ ಫಲಾನುಭವಿಗಳಿಗೆ ಪ್ರತಿ ಮಾಹೆಯಾನ ತಲಾ ರೂ.6000/-ಗಳ ಶಿಷ್ಯ ವೇತನವನ್ನು ನೀಡಲಾಗುವುದು. ತರಬೇತಿ ಅವಧಿಯಲ್ಲಿ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಅಭ್ಯರ್ಥಿಗಳೇ ಮಾಡಿಕೊಳ್ಳಬೇಕು ಮತ್ತು ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳು ಎರಡು ತಿಂಗಳ ಕಾಲ ಕಡ್ಡಾಯವಾಗಿ ಹಾಜರಾಗತಕ್ಕದ್ದು.
ಹೆಚ್ಚಿನ ವಿವರಗಳಿಗಾಗಿ ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಪ್ರಾಚಾರ್ಯರ ಕಚೇರಿ ದೂರವಾಣಿ ಸಂಖ್ಯೆ : 08182-223230 ಅಥವಾ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ನೋಡಲ್ ಅಧಿಕಾರಿ ಡಾ|| ಪ್ರಶಾಂತ್ ಕೇಕುಡ ಇವರನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.