ಬೆಂಗಳೂರು : ಮಾರ್ಚ್ 2024ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ಕ್ಕೆ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
2024 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಕ್ಕೆ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಉಲ್ಲೇಖ 03 ರಲ್ಲಿ ದಿನಾಂಕ 27-11-2023 ರವರೆಗೆ ರೂ 500+700=1200/- ರೂಗಳ ದಂಡಶುಲ್ಕದೊಂದಿಗೆ ಅವಕಾಶ ನೀಡಲಾಗಿತ್ತು. ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಿಸಿ ಆದೇಶಿಸಲಾಗಿದೆ.
ವಿವರ
ಶುಲ್ಕದ ಜೊತೆಗೆ ದಂಡಶುಲ್ಕ 500/- ರೂಗಳು ಮತ್ತು 700/- ಹಾಗೂ ವಿಶೇಷ 1320/- ರೂಗಳು
ವಿದ್ಯಾರ್ಥಿಗಳು ಕಾಲೇಜಿಗೆ ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕಶುಲ್ಕದ ಜೊತೆಗೆ ದಂಡ ಶುಲ್ಕ ರೂ.500 ಮತ್ತು 700 ರೂ ಹಾಗೂ ವಿಶೇಷ ದಂಡ ಶುಲ್ಕ ರೂ.1,320 ರೂ.
ವಿದ್ಯಾರ್ಥಿಗಳು ಕಾಲೇಜಿಗೆ ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕ 01-12-2023 ರಿಂದ 12-12-2023ರವರೆಗೆ ಅವಕಾಶ ನೀಡಲಾಗಿದೆ.ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ಮಾಹಿತಿಯನ್ನು PU Exam Portal Login ನಲ್ಲಿ Update ಮಾಡಲು ಕೊನೆಯ ದಿನಾಂಕ 13-12-2023 ಆಗಿದೆ.
ಕಾಲೇಜಿನವರು ಅರ್ಜಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಛೇರಿಗೆ ಸಲ್ಲಿಸಬೇಕಾದ ದಿನಾಂಕ15-12-2023 ಆಗಿದೆ.
ಜಿಲ್ಲಾ ಉಪನಿರ್ದೇಶಕರು ಪ್ರಾಂಶುಪಾಲರಿಂದ ಸ್ವೀಕರಿಸಿದ ಅರ್ಜಿಗಳನ್ನು ಮಂಡಲಿಯ ಜಾಲತಾಣದ PU Exam Portal Login ನಲ್ಲಿ Update ಮಾಡಿರುವುದನ್ನು ಖಾತ್ರಿಪಡಿಸಿಕೊಂಡು, ಪ್ರಾಂಶುಪಾಲರಿಂದ Update ಮಾಡಿರುವುದಕ್ಕೆ ಸಂಬಂಧಿಸಿದಂತೆ ಮುಚ್ಚಳಿಕೆ ಪತ್ರ ಪಡೆದ ನಂತರ ಕಾಲೇಜುವಾರು ಕ್ರೋಢೀಕೃತ ವಿದ್ಯಾರ್ಥಿಗಳ ಪಟ್ಟಿ, ಶುಲ್ಕ ಪಾವತಿಸಿರುವ ಮೂಲ ಚಲನ್ ಹಾಗೂ ಚೆಕ್ಲಿಸ್ಟ್ನ್ನು ಖುದ್ದಾಗಿ ಕೇಂದ್ರ ಕಛೇರಿಗೆ ದಿನಾಂಕ: 18-12-2023 ರಂದು ಸಲ್ಲಿಸಲು ಸೂಚಿಸಿದೆ.
![](https://kannadadunia.com/wp-content/uploads/2023/12/PUC.jpg)