ಬೆಂಗಳೂರು : 2024 ರ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರು ಪೂರ್ಣಗೊಳಿಸಲಾಗಿಲ್ಲದ [Not Completed] / ಹಿಂದಿನ ಸಾಲಿನಲ್ಲಿ ಹಾಜರಾದ / ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ 2024ರ ಜೂನ್ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ನಡೆಸುವ ಸಂಬಂಧ ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಉಲ್ಲೇಖ-1 &2 ರಂತೆ ಅಹ್ವಾನಿಸಲಾಗಿರುತ್ತದೆ.
ಸದರಿ ಉಲ್ಲೇಖಿತ ಮಾರ್ಗಸೂಚಿಯಲ್ಲಿ ಪರೀಕ್ಷಾ ಶುಲ್ಕ ಪಾವತಿಗಾಗಿ ನಿಗಧಿಪಡಿಸಿರುವ ದಿನಾಂಕಗಳನ್ನು ಈ ಕೆಳಕಂಡಂತೆ ವಿಸ್ತರಿಸಿದೆ.
ಆನ್‌ಲೈನ್‌ನಲ್ಲಿ ಪರೀಕ್ಷಾ ಅರ್ಜಿಯನ್ನು ನೋಂದಾಯಿಸಲು ಹಾಗೂ NEFT ಚಲನ್ ಮೂಲಕ ಬ್ಯಾಂಕ್‌ಗೆ ಪರೀಕ್ಷಾ ಶುಲ್ಕ ಪಾವತಿಸಲು ನಿಗಧಿಪಡಿಸಿರುವ ದಿನಾಂಕಗಳ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.
ಮೇಲೆ ವಿವರಿಸಿರುವಂತೆ ವಿಸ್ತರಿಸಿರುವ ದಿನಾಂಕದವರೆಗೆ ವಿದ್ಯಾರ್ಥಿಗಳ ನೋಂದಣಿ ಮಾಡತಕ್ಕದು. ಈ ಕುರಿತು ತಮ್ಮ ವ್ಯಾಪ್ತಿಗೆ ಬರುವ ಶಾಲಾ ಮುಖ್ಯೋಪಾಧ್ಯಾಯರು ಮುಖಾಂತರ ವಿದ್ಯಾರ್ಥಿಗಳ/ ಪೋಷಕರ ಗಮನಕ್ಕೆ ತಂದು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು/ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ತಿಳಿಸಿದೆ. ಮತ್ತೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ತಿಳಿಸಿದೆ.