ಬೆಂಗಳೂರು: 2024ರ ಮಾರ್ಚ್/ಏಪ್ರಿಲ್ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಪರೀಕ್ಷಾ ಅರ್ಜಿ ಶುಲ್ಲ ಪಾವತಿಸಲು ಜನವರಿ 11 ಕೊನೆಯ ದಿನಾಂಕವಾಗಿದೆ.
ಪರೀಕ್ಷೆಗೆ ನೋಂದಾಯಿಸಿಕೊಂಡ ಶಾಲಾ ಅಭ್ಯರ್ಥಿ, ಖಾಸಗಿ ಅಭ್ಯರ್ಥಿ, ಪುನರಾವರ್ತಿತರು ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳು ಜನವರಿ 11ರೊಳಗೆ ಪರೀಕ್ಷಾ ಶುಲ್ಕ ಪಾವತಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸೂಚನೆ ನೀಡಿದೆ.
ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ (htpps://kseab.karnataka.gov.in) ಲಾಗಿನ್ನಲ್ಲಿ ಜ.2ರಿಂದ ಪರೀಕ್ಷಾ ಶುಲ್ಕ ಪಾವತಿಗೆ ಚಲನ್ ಜನರೇಟ್ ಆಗುತ್ತಿದ್ದು, ಚಲನ್ ಜನರೇಟ್ ಮಾಡಿಕೊಂಡು ಮುದ್ರಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಚಲನ್ ಮೂಲಕ ಬ್ಯಾಂಕ್ನಲ್ಲಿ ಶುಲ್ಕ ಜಮೆ ಮಾಡಲು ಜ.2ರಿಂದ 11ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಪ್ರಕಟಣೆ ಹೊರಡಿಸಿದೆ.