alex Certify BIG NEWS : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ತಪ್ಪದೇ ಈ ಕೆಲಸ ಮಾಡುವಂತೆ ಸೂಚನೆ..!

ಬೆಂಗಳೂರು : 2021-22 ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ನೌಕರರುಗಳ ಸೇವಾ ವಹಿಯನ್ನು “ವಿದ್ಯುನ್ಮಾನ ಸೇವಾ ವಹಿ” (Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸಲು ಸಂಬಂಧಪಟ್ಟ ಎಲ್ಲಾ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿರುತ್ತದೆ ಹಾಗೂ ಎಲ್ಲಾ ಸಿಬ್ಬಂದಿಗಳ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದಿನ ದಿನಗಳಲ್ಲಿ ESR ನಲ್ಲಿಯೇ ಮುಂದುವರೆಸುವಂತೆ ತಿಳಿಸಲಾಗಿದೆ.

ಹಾಗೂ HRMS 1. 0 ತಂತ್ರಾಂಶದ ಸೇವಾವಹಿ ಭಾಗದಲ್ಲಿ ನೌಕರರ ಮಾಹಿತಿಯೂ ಲಭ್ಯವಿದ್ದು ಸದರಿ ಮಾಹಿತಿಯನ್ನು HRMS 2.0 ಭಾಗವಾಗಿರುವ ವಿದ್ಯುನ್ಮಾನ ಸೇವಾ ವಹಿ (ESR) ಗೆ ವರ್ಗಾಯಿಸಲು ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸದರಿ ಮಾಹಿತಿಯನ್ನು ವರ್ಗಾಯಿಸಿದ ನಂತರ ESR ನಲ್ಲಿ ಯಾವುದೇ ತಿದ್ದುಪಡಿ ಮಾಡುವ ಅವಕಾಶವಿಲ್ಲದಿರುವ ಕಾರಣ HRMS – 1.0 ತಂತ್ರಾಂಶದಲ್ಲಿ ಲಭ್ಯವಿರುವ ಸರ್ಕಾರಿ ನೌಕರರುಗಳ ಸೇವಾ ವಹಿಯ ಪೂರ್ಣ ಮಾಹಿತಿಯನ್ನು ಪರಿಶೀಲಿಸಿ ಅವಶ್ಯಕವಿದ್ದಲ್ಲಿ ಸರಿಪಡಿಸುವಂತೆ ಸೂಚಿಸಲಾಗಿದೆ.
ಈ ಸಂಬಂಧ ಉಲ್ಲೇಖ(2) ರಂತೆ ಈ ಕಛೇರಿಯ ಅಧೀನದಲ್ಲಿ ಬರುವ ಸಿ.ಟಿ.ಇ, ಡಯಟ್ ಮತ್ತು ಜಿ.ಟಿ.ಟಿ.ಐ ಗಳ ಪ್ರಾಂಶುಪಾಲರು, ಲೆಕ್ಕ ಅಧೀಕ್ಷಕರು ಹಾಗೂ HRMS ನಿರ್ವಹಿಸುವ ಕಾರ್ಯ ನಿರ್ವಾಹಕರಿಗೆ ತಮ್ಮ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿ ಮತ್ತು ಡಿ ವೃಂದದ ಸಿಬ್ಬಂದಿಗಳ ಸೇವಾ ಪುಸ್ತಕಗಳನ್ನು ESR ಗೆ ಪರಿವರ್ತನೆ ಮಾಡುವ ಸಂಬಂಧ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಜೂಮ್ ಸಭೆಯಲ್ಲಿ ದಿನಾಂಕ:13/05/2024 ರಂದು ಪೂರ್ಣ ಪ್ರಮಾಣದ ತರಬೇತಿಯನ್ನು ನೀಡಲಾಗಿರುತ್ತದೆ.

ಆದಾಗ್ಯೂ ಸಹ ಭೌತಿಕ ಸೇವಾ ಪುಸ್ತಕಗಳನ್ನು ESR ಗೆ ಪರಿವರ್ತಿಸುವ ಕಾರ್ಯದಲ್ಲಿ ಯಾವುದೇ ಪ್ರಗತಿ ಕಂಡುಬಂದಿರುವುದಿಲ್ಲ.ESR ಬಗ್ಗೆ, ಮಾನ್ಯ ಯೋಜನಾ ನಿರ್ದೇಶಕರು, HRMS – 2.0 ರವರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿ ಮತ್ತು ಡಿ ದರ್ಜೆಯ ಎಲ್ಲ ನೌಕರರ ಭೌತಿಕ ಸೇವಾ ಪುಸ್ತಕಗಳನ್ನು ESR ತಂತ್ರಾಂಶಕ್ಕೆ ಪರಿವರ್ತನೆ ಕಾರ್ಯವನ್ನು ತುರ್ತಾಗಿ ಪೂರ್ಣಗೊಳಿಸಲು ಸೂಚನೆ ನೀಡಿರುತ್ತಾರೆ. ಈ ಹಿನ್ನೆಲೆಯಲ್ಲಿ ತಮ್ಮ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿ ಮತ್ತು ಡಿ ಗುಂಪಿನ ನೌಕರರ ಭೌತಿಕ ಸೇವಾ ಪುಸ್ತಕಗಳನ್ನು ESR ಆಗಿ ಪರಿವರ್ತಿಸುವ ಕಾರ್ಯವನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ತಿಳಿಸಿದೆ. ಈ ಬಗ್ಗೆ ಯಾವುದೇ ರೀತಿಯ ಸಮಸ್ಯೆಗಳುಂಟಾದಲ್ಲಿ ನೋಡಲ್ ಅಧಿಕಾರಿ, HRMS ವಿಭಾಗ, hrmsdsert@gmail.com, tech2.dsert-ka@nic.in ಸಂಪರ್ಕಿಸುವಂತೆ ತಿಳಿಸಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...