alex Certify BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಶುಲ್ಕವಿನಾಯ್ತಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ಮಾ. 15 ರವರೆಗೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಶುಲ್ಕವಿನಾಯ್ತಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ಮಾ. 15 ರವರೆಗೆ ವಿಸ್ತರಣೆ

2023-24 ನೇ ಸಾಲಿನಲ್ಲಿ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಮತ್ತು ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ತಡವಾಗಿ ಪ್ರಾರಂಭವಾದ ಕೋರ್ಸುಗಳು ಮತ್ತು ಹಿಂದಿನ ಶೈಕ್ಷಣಿಕ ವರ್ಷದ ಫಲಿತಾಂಶ ನೀಡದ ಕೋರ್ಸುಗಳ ಅರ್ಜಿ ಸಲ್ಲಿಸದಿರುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ ಶುಲ್ಕವಿನಾಯ್ತಿ ಸೌಲಭ್ಯಕ್ಕಾಗಿ” ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://bcwd.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಗಾಗಿ ಇಲಾಖೆಯ ವೆಬ್ಸೈಟ್ postmatrichelp@karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ 8050770005 ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ: 08272-295628 ಸಂಪರ್ಕಿಸಬಹುದು. ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪಿ.ಪಿ.ಕವಿತಾ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...