ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನವದೆಹಲಿ ರವರ ಮಾರ್ಗಸೂಚಿಯಂತೆ ಎನ್ಎಂಎಎಸ್ ಪರೀಕ್ಷೆಯನ್ನು 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕೆಎಸ್ಕ್ಯುಎಎಸಿ ವತಿಯಿಂದ ನಡೆಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಎನ್ಎಂಎಎಸ್ ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆಯ ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಪರೀಕ್ಷೆಯ ಆನ್ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ https://kseab.karnataka.gov.in/ ವೆಬ್ಸೈಟ್ನಲ್ಲಿ ಲಭ್ಯವಿದೆ.
ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್ಲೈನ್ನಲ್ಲಿ ಮಂಡಳಿಯ ವೆಬ್ಸೈಟ್ನಲ್ಲಿ ಲಭ್ಯವಿರುವ ಎನ್ಎಂಎAಎಸ್ ಲಾಗಿನ್ನಲ್ಲಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್ಸೈಟ್ನಲ್ಲಿನ ಸುತ್ತೋಲೆ ನೋಡಬಹುದು ಹಾಗೂ ಕೆಎಸ್ಕ್ಯುಎಎಸಿ ಕಚೇರಿಯ ದೂ.080-23341615 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.