ಶಿವಮೊಗ್ಗ : ನ್ಯಾಷನಲ್ ಇ-ಸ್ಕಾಲರ್ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 2023-24ನೇ ಸಾಲಿಗೆ ಪ್ರಿ-ಮೆಟ್ರಿಕ್, ಪೋಸ್ಟ್ -ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಪ್ರಿ-ಮೆಟ್ರಿಕ್ಗೆ ನ.30, ಪೋಸ್ಟ್ -ಮೆಟ್ರಿಕ್ ಹಾಗೂ ಟಾಪ್-ಕ್ಲಾಸ್ ವಿದ್ಯಾರ್ಥಿಗಳಿಗೆ ಡಿ.31 ಕೊನೆಯ ದಿನಾಂಕವಾಗಿರುತ್ತದೆ. ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ಪಡೆಯಲು ಕೇಂದ್ರ ಸರ್ಕಾರದ ಎನ್.ಎಸ್.ಪಿ ಪೋರ್ಟಲ್ ನಲ್ಲಿ https://scholarships.gov.in ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ದೂರವಾಣಿ ಸಂಖ್ಯೆ : 08182-295234/251676 ನ್ನು ಸಂಪರ್ಕಿಸುವಂತೆ ಶಿವಮೊಗ್ಗ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.