2023-24ನೇ ಸಾಲಿನಲ್ಲಿ ( NMMSS) ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ Online ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04.10.2023 ಆಗಿರುತ್ತದೆ.
2023-24ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ದಿನಾಂಕ:17.12.2023 ರಂದು ನಡೆಸಲಾಗುವುದು. ಆದರಂತೆ NMMS ಪರೀಕ್ಷೆಗೆ: Online ಮೂಲಕ ಅರ್ಜಿಯನ್ನು ದಿನಾಂಕ:13.09,2023 ರಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ವೆಬ್ ಸೈಟ್ನ NMMS ಲಾಗಿನ್ನಲ್ಲಿ ಲಭ್ಯ ಮಾಡಲಾಗುವುದು. ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರು ತಮ್ಮ ಶಾಲಾ ವಿದ್ಯಾರ್ಥಿಗಳ ಅರ್ಜಿಗಳನ್ನು ಕಡ್ಡಾಯವಾಗಿ Online ಮೂಲಕವೇ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04.10.2023ಆಗಿರುತ್ತದೆ.
NMMS ಪರೀಕ್ಷೆಯ ಸಂಕ್ಷಿಪ್ತ ವಿವರ
– ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವುದು, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಮಾಧ್ಯಮಿಕ ಶಾಲಾ ಹಂತದಲ್ಲಿ ಶಾಲೆಯಿಂದ ಹೊರಗುಳಿಯದಂತೆ ತಡೆಯುವುದು ಮತ್ತು ಅವರ ವಿದ್ಯಾಭ್ಯಾಸದ ಮುಂದುವರಿಕೆಗೆ ಪ್ರೇರೇಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಸದರಿ ಪರೀಕ್ಷೆಯನ್ನು ಕನ್ನಡ, ಇಂಗ್ಲೀಷ್, ಉರ್ದು, ಮರಾಠಿ ಮತ್ತು ತೆಲುಗು ಮಾಧ್ಯಮಗಳಲ್ಲಿ ನಡೆಸುತ್ತಿದ್ದು, ಈ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ತಾಲ್ಲೂಕು ಕೇಂದ್ರಗಳಲ್ಲಿ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ (Local body schools) ಶಾಲೆಗಳಲ್ಲಿ 2023-24ನೇ ಸಾಲಿನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ NMMS ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಸತಿಯುತ ಶಾಲೆಗಳ ವಿದ್ಯಾರ್ಥಿಗಳು NMMS ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. (ಉದಾ: ಮೊರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ, ನವೋದಯ ಶಾಲೆ, ವಾಜಪೇಯಿ ಶಾಲೆ, ಏಕಲವ್ಯ, ಕೆ.ಜಿ.ಬಿ.ವಿ, ಅಂಬೇಡ್ಕರ್ ವಸತಿ ಶಾಲೆ ಇತ್ಯಾದಿ) ಹಾಗೆಯೇ ಕೇಂದ್ರೀಯ ವಿದ್ಯಾಲಯ, ಸೈನಿಕ ಶಾಲೆಗಳ ವಿದ್ಯಾರ್ಥಿಗಳು ಕೂಡ ಈ ಪರೀಕ್ಷೆಗೆ ಅರ್ಹರಿರುವುದಿಲ್ಲ. ಸರ್ಕಾರದಿಂದ ಅನುದಾನ ಪಡೆಯುವ ಯಾವುದೇ ಖಾಸಗಿ ಅನುದಾನಿತ ವಸತಿ ಶಾಲೆಗಳ ವಿದ್ಯಾರ್ಥಿಗಳು ಸಹ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಮಂಡಲಿ ಸೂಚನೆಯನ್ನು ಉಲ್ಲಂಘಿಸಿ ಅರ್ಜಿ ಸಲ್ಲಿಸಿದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶವಿರುವುದಿಲ್ಲ ಹಾಗೂ ಅಂತಹ ಶಾಲಾ ಮುಖ್ಯ ಶಿಕ್ಷಕರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಹಾಗೂ ಶಾಲೆಯ ಮುಖ್ಯಸ್ಥರು ಸುತ್ತೋಲೆಯನ್ನು ವೀಕ್ಷಿಸಬಹುದಾಗಿದೆ.









