ಶಿವಮೊಗ್ಗ : ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯು 2023-24ನೇ ಸಾಲಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ನಲ್ಲಿ ನವೀನ ಹಾಗೂ ನವೀಕರಣ ವಿದ್ಯಾರ್ಥಿಗಳಿಂದ SATS ID ಮುಖಾಂತರ ಅರ್ಜಿ ಆಹ್ವಾನಿಸಿದೆ.
ಅರ್ಜಿಯೊಂದಿಗೆ ಪೋಷಕರ ಮೊಬೈಲ್ ಸಂ., ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ/ಇ.ಐ.ಡಿ.ಸಂಖ್ಯೆ ಮತ್ತು ಆಧಾರ್ನಲ್ಲಿರುವ ಹೆಸರು ಒಂದೇ ಆಗಿರಬೇಕು. ವಿದ್ಯಾರ್ಥಿಯ ಹೆಸರಿನಲ್ಲಿ ನೀಡಿರುವ ಗಣಕೀಕೃತ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ವಿದ್ಯಾರ್ಥಿಯ ಆಧಾರ್ ಸೀಡೀಂಗ್ ಹಾಗೂ ಎನ್.ಪಿ.ಸಿ.ಐ ಮ್ಯಾಪಿಂಗ್ ಆಗಿರುವ ರಾಷ್ಟ್ರೀಕೃತ ಬ್ಯಾಂಕ್ ಖಾತೆ ಪ್ರತಿಯನ್ನು ಲಗತ್ತಿಸಿರಬೇಕು.ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ. ಸಂ.: 08282-263761 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.