alex Certify ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಗಮನಕ್ಕೆ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ(2023-24) ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಇಲಾಖಾ ವೆಬ್ಸೈಟ್ www.ssp.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ(ಮೆಟ್ರಿಕ್ ಪೂರ್ವ ಆದಾಯ ಮಿತಿ 1 ರಿಂದ 8 ನೇ ತರಗತಿಗೆ 6 ಲಕ್ಷ ಮತ್ತು 9 ರಿಂದ 10 ನೇ ತರಗತಿಗೆ 2.50 ಲಕ್ಷ), ವಿದ್ಯಾರ್ಥಿಯ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್(ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್ಪಿಸಿಐ ಮ್ಯಾಪಿಂಗ್ ಮಾಡಿಸಿರತಕ್ಕದು), ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಇತ್ತೀಚಿನ ಭಾವಚಿತ್ರ, ತಂದೆ, ತಾಯಿ ಪೋಷಕರ ಆಧಾರ್ ದಾಖಲಾತಿ ಪ್ರತಿ, ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಇಲಾಖಾ ವೆಬ್ಸೈಟ್ www.ssp.karnataka.gov.in ನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 080-44554455 ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಅವರ ಕಚೇರಿ ದೂ.ಸಂ.9480843156/ 08276-281115 ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...