alex Certify ವಿದ್ಯಾರ್ಥಿಗಳ ಗಮನಕ್ಕೆ : ಕ.ರಾ.ಮು.ವಿವಿಯ ವಿವಿಧ ಕೋರ್ಸ್ ಗಳ ಪ್ರವೇಶಾತಿ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಗಮನಕ್ಕೆ : ಕ.ರಾ.ಮು.ವಿವಿಯ ವಿವಿಧ ಕೋರ್ಸ್ ಗಳ ಪ್ರವೇಶಾತಿ ಅವಧಿ ವಿಸ್ತರಣೆ

ಬೆಂಗಳೂರು ನಗರ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಬಾಪೂಜಿನಗರ ಪ್ರಾದೇಶಿಕ ಕೇಂದ್ರದಲ್ಲಿ 2023-24 ನೇ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಬಿ. ಎ/ ಬಿ. ಕಾಂ/ ಬಿ. ಬಿ. ಎ/ ಬಿ. ಸಿ. ಎ./ ಬಿ. ಎಲ್. ಐ. ಎಸ್ಸಿ ಹಾಗೂ ಬಿ. ಎಸ್ಸಿ / ಎಂ. ಎ / ಎಂ. ಸಿ. ಜೆ / ಎಂ.ಕಾಂ /.. ಎಂ. ಎಲ್. ಐ. ಎಸ್ಸಿ., ಎಂ.ಎಸ್ಸಿ,. ಎಂ. ಬಿ. ಎ., ಪಿಜಿ. ಡಿಪ್ಲೋಮಾ ಪ್ರೋಗ್ರಾಮ್ಸ್., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಕೋರ್ಸ್ ಗಳ ಪ್ರವೇಶಾತಿಗಾಗಿ ಅವಧಿ ವಿಸ್ತರಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಕರಾಮುವಿಯ ಅಧಿಕೃತ ವೆಬ್: www.ksoumyasuru.ac.in ಮೂಲಕ ಸೆಪ್ಟೆಂಬರ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26 ಅಥವಾ ದೂರವಾಣಿ ಸಂಖ್ಯೆ: 080-26603664 ಹಾಗೂ 98449 65515 ಅನ್ನು ಸಂಪರ್ಕಿಸಬಹುದೆಂದು ಕ.ರಾ.ಮು.ವಿ.ಯ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...