alex Certify ವಿದ್ಯಾರ್ಥಿಗಳ ಗಮನಕ್ಕೆ : ‘PRIZE MONEY’ ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಗಮನಕ್ಕೆ : ‘PRIZE MONEY’ ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಉಡುಪಿ : ‘PRIZE MONEY’  (ಬಹುಮಾನ ಹಣ) ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 31 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಮುಂತಾದ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ, ಇಲಾಖೆಯ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 31 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2574892 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...