alex Certify ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಂದ 2023-24ನೇ ಸಾಲಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು www.ssp.postmartic.karnataka.gov.inವೆಬ್ಸೈಟ್ ಮೂಲಕ ದಿ:10/01/2024ರೊಳಗಾಗಿ ಸಲ್ಲಿಸುವುದು. ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmartichelp@karnataka.gov.in ದೂ.ಸಂ.: 1902 ನ್ನು ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸುವುದು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...