alex Certify ‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ವಕೀಲ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಅಲ್ಪಸಂಖ್ಯಾತ’ ಸಮುದಾಯದ ವಿದ್ಯಾರ್ಥಿಗಳ ಗಮನಕ್ಕೆ : ವಕೀಲ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2023-24 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಮಾಸಿಕ ರೂ.5 ಸಾವಿರ ರೂ ತರಬೇತಿ ಭತ್ಯೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ದಿನಾಂಕ: 07-10-2023 ರೊಳಗಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿ ಪಡೆಯ ಬಯಸುವ ಅಭ್ಯರ್ಥಿಗಳು ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಯನ್ನು ಸಂಪರ್ಕಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ www.dom.karnataka.gov.in ಅನ್ನು ಸಂಪರ್ಕಿಸಬಹುದು. ಕಚೇರಿ ದೂರವಾಣಿ ಸಂಖ್ಯೆ: 08272-225528/220214 ಹಾಗೂ ಇಲಾಖಾ ವೆಬ್ಸೈಟ್ www.dom.karnataka.gov.in ನಿಂದ ಅಲ್ಪಸಂಖ್ಯಾತರ ಎಲ್ಲಾ ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಮತ್ತು ಇತರೆ ಸೌಲಭ್ಯಗಳ ಮಾಹಿತಿಯನ್ನು ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...