ಬೆಂಗಳೂರು : ಪ್ರಸಕ್ತ (2023-24) ಸಾಲಿಗೆ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ (ಪಿಯುಸಿ, ಡಿಪ್ಲೋಮ, ಪದವಿ, ಎಂಜಿನಿಯರಿಂಗ್, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಮತ್ತು ಪಿಯುಸಿ ನಂತರದ ಇತರೆ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸಂಬಂಧಿಸಿದಂತೆ ಎಸ್ಎಸ್ಪಿ ಪೋರ್ಟಲ್ https://ssp.karnataka.gov.in ಮತ್ತು https://dom.karnataka.gov.in ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 30 ಕೊನೆಯ ದಿನವಾಗಿದೆ.
ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಜನವರಿ, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ. ಆನ್ ಲೈನ್ ಅರ್ಜಿಗಾಗಿ ಈ ಕೆಳಗಿನ ಜಾಲತಾಣಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳು ಈ ಕೆಳಗಿನ ಲಿಂಕ್ಗಳಿಗೆ ಭೇಟಿ ನೀಡುವ ಮೂಲಕ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸಬಹುದು. https://ssp.postmatric.karnataka.gov.in
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30/01/2024 ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ತಾಲೂಕುಮಾಹಿತಿ ಕೇಂದ್ರಗಳನ್ನು (MIC) ಸಂಪರ್ಕಿಸಬಹುದು.