alex Certify ಪೋಷಕರೇ ಗಮನಿಸಿ : ರಾಜ್ಯದ 123 ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರೇ ಗಮನಿಸಿ : ರಾಜ್ಯದ 123 ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯದ 123 ವಿವಿಧ ವಸತಿ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶಾತಿಗೆ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಡಾ// ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು (ಸಿಬಿಎಸ್ಇ) 29 ಶಾಲೆಗಳಲ್ಲಿ ಹಾಗೂ ಮೊರಾರ್ಜಿ ದೇಸಾಯಿಯ 90 ಶಾಲೆಗಳಲ್ಲಿ ಹಾಗೂ 4 ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದವರಾದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ದಿಸ್ಟ್, ಸಿಖ್ ಮತ್ತು ಪಾರ್ಸಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in/ ಗೆ ಭೇಟಿ ನೀಡಬೇಕು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15-03-2024 ಆಗಿದ್ದು, ಹೆಚ್ಚಿನ ವಿವರಗಳಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯ ವೆಬ್ಸೈಟ್ https://dom.karnataka.gov.in ವಿಸಿಟ್ ಮಾಡಬಹುದಾಗಿದೆ. ಅಥವಾ ಅಲ್ಪಸಂಖ್ಯಾತರ ಸಹಾಯವಾಣಿ 8277799999, 080-22535902 ಸಂಪರ್ಕಿಸಬಹುದಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...