alex Certify ವಿದ್ಯಾರ್ಥಿಗಳ ಗಮನಕ್ಕೆ : ‘NMMS ‘ ಪರೀಕ್ಷೆಯ ಕೀ ಉತ್ತರಕ್ಕೆ ಆಕ್ಷೇಪಣೆ ಸಲ್ಲಿಸಲು ಇಂದು ಕೊನೆಯ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ಗಮನಕ್ಕೆ : ‘NMMS ‘ ಪರೀಕ್ಷೆಯ ಕೀ ಉತ್ತರಕ್ಕೆ ಆಕ್ಷೇಪಣೆ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು : 2023-24ನೇ ಸಾಲಿನ NMMS ಪರೀಕ್ಷೆಯ ಕೀ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು (16.01.2024) ಇಂದು ಸಂಜೆ 5.30 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಶ್ನೆ ಪತ್ರಿಕೆಗಳಲ್ಲಿನ ಪ್ರಶ್ನೆಗಳ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಈ ಕಛೇರಿಯಿಂದ ನೀಡಲಾದ ನಿಗದಿತ ನಮೂನೆ ಮಂಡಳಿಯ ವೆಬ್ ಸೈಟ್ನಲ್ಲಿ (https://kseab.karnataka.gov.in/) ದೊರೆಯುತ್ತದೆ .

NMMS ಪರೀಕ್ಷೆಯ ಪ್ರಶ್ನೆಪತ್ರಿಕೆ-1 ಮತ್ತು 2ರ ಪ್ರತಿ ಪ್ರಶ್ನೆಗಳಿಗೆ ಪ್ರತ್ಯೇಕವಾಗಿ ಆಕ್ಷೇಪಣೆಗಳನ್ನು ಪೂರಕ – (ksqaacntsenmms@gmail.com) ನಿರ್ದೇಶಕರು, ಕೆ.ಎಸ್.ಕ್ಯು.ಎ.ಎ.ಸಿ, ಕೆ.ಎಸ್.ಇ.ಎ.ಬಿ, 1ನೇ ಮಹಡಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಈ ವಿಳಾಸಕ್ಕೆ ದಿನಾಂಕ:16.01.2024 ರ ಸಂಜೆ 5.30ರ ಒಳಗೆ ತಲುಪುವಂತೆ ಸಲ್ಲಿಸುವುದು. ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಬರುವಂತಹ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...