alex Certify ‘SSLC’ ಪರೀಕ್ಷೆ-1 ರಲ್ಲಿ ಫೇಲ್ ಆದ ವಿದ್ಯಾರ್ಥಿಗಳ ಗಮನಕ್ಕೆ ; ಮೇ.29 ರಿಂದ ‘ಪರಿಹಾರ ಬೋಧನೆ’ ತರಗತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘SSLC’ ಪರೀಕ್ಷೆ-1 ರಲ್ಲಿ ಫೇಲ್ ಆದ ವಿದ್ಯಾರ್ಥಿಗಳ ಗಮನಕ್ಕೆ ; ಮೇ.29 ರಿಂದ ‘ಪರಿಹಾರ ಬೋಧನೆ’ ತರಗತಿ

ಬೆಂಗಳೂರು : 2024ರ ಎಸ್. ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದಿನಾಂಕ:29.05.2024 ರಿಂದ 13.06.2024ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ನಡೆಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ವಿಷಯಕ್ಕೆ ಸಂಬಂಧಿಸಿದಂತೆ 2024ರ ಮಾರ್ಚ್-ಏಪ್ರಿಲ್ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಹಾಗೂ ಸಿ ಮತ್ತು ಸಿ+ ಶ್ರೇಣಿ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ದಿನಾಂಕ: 14.06.2024 ರಿಂದ ಪ್ರಾರಂಭವಾಗುವ 2024ರ ಎಸ್. ಎಸ್.ಎಲ್.ಸಿ.ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ: 29.05.202480 13.06.2024 ರವರೆರಗೆ ನಡೆಸಲು ಸೂಚಿಸಲಾಗಿದೆ.

ಸದರಿ ತರಗತಿಗಳನ್ನು ನಡೆಸಲು ಈ ಕೆಳಗಿನ ಸೂಚನೆಗಳನ್ನು ಪಾಲಿಸಲು ತಿಳಿಸಿದೆ.

1. ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಎಸ್. ಎಸ್.ಎಲ್.ಸಿ. ಪರೀಕ್ಷೆ-2 ತೆಗೆದುಕೊಳ್ಳಲು ಕಡ್ಡಾಯವಾಗಿ ನೊಂದಾಯಿಸಲು ಕ್ರಮವಹಿಸುವುದು.

2. 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1 ರಲ್ಲಿ c, c+. ಶ್ರೇಣಿ ಪಡೆದ ವಿದ್ಯಾರ್ಥಿಗಳು ಅವರ ಫಲಿತಾಂಶ ಸುಧಾರಣೆಗಾಗಿ ಪರೀಕ್ಷೆ-2ನ್ನು ಬರೆಯಲು ಉತ್ತೇಜಿಸಿ ನೊಂದಾಯಿಸಲು ಕ್ರಮವಹಿಸುವುದು ಹಾಗೂ ವಿಶೇಷ ಪರಿಹಾರ ಬೋಧನೆ ತರಗತಿಗೆ ಹಾಜರಾಗಲು ಅವರಿಗೂ ಅವಕಾಶ ಕಲ್ಪಿಸುವುದು.

3. ಸರ್ಕಾರಿ/ಅನುದಾನಿತ ಶಾಲೆಯಲ್ಲಿ ಆಯಾ ಶಾಲೆಗಳಲ್ಲಿ 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಸದರಿ ಪರೀಕ್ಷೆಯಲ್ಲಿ c. c+, ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಆಯಾ ಶಾಲೆಯಲ್ಲಿಯೇ ಅದೇ ಶಾಲೆಯ ವಿಷಯ ಬೋಧಕ ಶಿಕ್ಷಕರಿಂದ ವಿಶೇಷ ತರಗತಿಗಳನ್ನು ನಡೆಸುವುದು.

4. ಆಯಾ ಶಾಲೆಗಳ ಮುಖ್ಯ ಶಿಕ್ಷಕರು ಈ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳ ವೇಳಾಪಟ್ಟಿಯನ್ನು ಸಿದ್ಧಪಡಿಸಿ, ಸದರಿ ತರಗತಿಗಳು ಸಮರ್ಪಕವಾಗಿ ನಡೆಸಲು ಕ್ರಮವಹಿಸುವುದು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...