alex Certify ಪ್ರವಾಸಿಗರೇ ಗಮನಿಸಿ : ನಂದಿಗಿರಿಧಾಮಕ್ಕೆ ಇಂದು ಪ್ರವೇಶ ನಿರ್ಬಂಧ |Nandi Hills | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರೇ ಗಮನಿಸಿ : ನಂದಿಗಿರಿಧಾಮಕ್ಕೆ ಇಂದು ಪ್ರವೇಶ ನಿರ್ಬಂಧ |Nandi Hills

ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನೆಲೆ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ 6 ಗಂಟೆವರೆಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದಾರೆ. ನಂದಿ ಹಿಲ್ಸ್ಗೆ ಸಾರ್ವಜನಿಕರ ಪ್ರವೇಶ ಮತ್ತು ಹೊಸ ವರ್ಷ ನಿಮಿತ್ತ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ .

ನಂದಿಗಿರಿಧಾಮದ ಸುತ್ತಮುತ್ತ ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ., ವೀಕೆಂಡ್ ಬಂದರೆ ಸಾಕು ನಂದಿಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...