ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತದಲ್ಲಿ ಗಾಯಗೊಂಡ ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸೇಂಟ್ ಜಾನ್ ಆಸ್ಪತ್ರೆ ಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ವೆಂಕಟೇಶ್ ಎಂಬುವವರ ಸ್ಥಿತಿ ಗಂಭೀರವಾಗಿದ್ದು, ಶೇ.50ರಷ್ಟು ಗಾಯಗೊಂಡಿದ್ದಾರೆ. ರಾಜೇಶ್ಗೆ ಶೇ.28ರಷ್ಟು ಸುಟ್ಟ ಗಾಯ, ನವೀನ್ಗೆ ಶೇ.15ರಷ್ಟು ಗಾಯಗಳಾಗಿವೆ. ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಜೊತೆಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತ ದುರದೃಷ್ಟಕರ. ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನರು ಸಜೀವ ದಹನಗೊಂಡಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.