alex Certify BREAKING: ಪಟಾಕಿ ದುರಂತದಲ್ಲಿ 14 ಜನ ಸಜೀವ ದಹನ ಕೇಸ್; ಮೂವರು ಅಧಿಕಾರಿಗಳ ಸಸ್ಪೆಂಡ್ ಗೆ ಸಿಎಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಟಾಕಿ ದುರಂತದಲ್ಲಿ 14 ಜನ ಸಜೀವ ದಹನ ಕೇಸ್; ಮೂವರು ಅಧಿಕಾರಿಗಳ ಸಸ್ಪೆಂಡ್ ಗೆ ಸಿಎಂ ಸೂಚನೆ

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಬೆಂಕಿ ದುರಂತ ಸಂಭವಿಸಿ 14 ಜನ ಸಜೀವ ದಹನವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

ಪಟಾಕಿ ಗೋಡೌನ್ ನಲ್ಲಿ ಅಗ್ನಿ ದುರಂತ ಪ್ರಕರಣ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಬಳಿಕ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ ಪಟಾಕಿ ದುರಂತ ಪ್ರಕರಣ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಸೂಚಿಸಲಾಗಿದೆ.

ತಹಶೀಲ್ದಾರ್, ಪಿಐ ಹಾಗೂ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಲು ಆದೇಶಿಸಲಾಗಿದೆ. ಬೆಂಗಳೂರು ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಸೂಚಿಸಲಾಗಿದೆ ಎಂದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...