ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತ ಪ್ರಕರಣದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ಆರಂಭವಾಗಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಆರಂಭವಾಗಿದ್ದು, ಪಟಾಕಿ ದುರಂತದ ಹಿನ್ನೆಲೆ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮ, ಕಠಿಣ ನಿಯಮಗಳ ಜಾರಿ ಸಂಬಂಧ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮ್ಯ ಚರ್ಚೆ ನಡೆಸಲಿದ್ದಾರೆ.
ಅತ್ತಿಬೆಲೆಯಲ್ಲಿ ನಡೆದ ಪಟಾಕಿ ದುರಂತಕ್ಕೆ ಇಡೀ ರಾಜ್ಯವೇ ಮರುಗಿದೆ. ಘೋರ ದುರಂತದಲ್ಲಿ 14 ಮಂದಿ ಸುಟ್ಟು ಕರಕಲಾಗಿದ್ದು, ಅತ್ತಿಬೆಲೆಯ ಬಾಲಾಜಿ ಪಟಾಲಿ ಅಂಗಡಿಗೆ ಬೆಂಕಿ ಬಿದ್ದು 14 ಮಂದಿ ಸಜೀವ ದಹನವಾಗಿದ್ದು, ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದಿದ್ದರಿಂದ ಈ ಘಟನೆ ನಡೆದಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಅಲರ್ಟ್ ಸರ್ಕಾರ ಹಲವು ಕಠಿಣ ನಿಯಮ ಜಾರಿಗೆ ತರಲು ಸಿದ್ದತೆ ನಡೆಸಿದೆ.