ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿಯ ನಿರ್ದೇಶಕ ಬಾಬು ಅವರನ್ನು ಕಳವು ಮಾಲು ಸ್ವೀಕರಿಸಿದ ಆರೋಪದಡಿ ಬಂಧಿಸಲಾಗಿದೆ.
ಈ ಕುರಿತಾಗಿ ತುಮಕೂರು ಜಿಲ್ಲೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಪೊಲೀಸರು ಬೆಂಗಳೂರಿನ ನಿವಾಸದಲ್ಲಿ ಅಟ್ಟಿಕಾ ಬಾಬು ಅವರನ್ನು ಬಂಧಿಸಿದ್ದಾರೆ.
ಕಳವು ಮಾಲು ಸ್ವೀಕರಿಸಿದ್ದ ಬಾಬು ವಿರುದ್ಧ ಐಪಿಸಿ ಸೆಕ್ಷನ್ 454, 380, 411, 413ರಡಿ ಕೇಸ್ ದಾಖಲಾಗಿದ್ದು, ತುರುವೇಕೆರೆ ಸಿಪಿಐ ಲೋಹಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.