ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಕಾಂಗ್ರೆಸ್ ಪಕ್ಷದಲ್ಲಿ ಶೀತಲಸಮರ ಶುರುವಾಗಿದೆ. ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರು ಮತ್ತು ಮೂಲ ಕಾಂಗ್ರೆಸ್ಸಿಗರ ನಡುವೆ ಫೈಟ್ ಶುರುವಾಗಿದೆ.
ಗ್ರಾಮ ಪಂಚಾಯಿತಿ ಮತ್ತು ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಗೆಲ್ಲಲು ಶರತ್ ಬಚ್ಚೇಗೌಡ ಕಾರಣ ಎಂದು ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಇದರ ಬಗ್ಗೆ ಮೂಲ ಕಾಂಗ್ರೆಸ್ಸಿಗರು ಪಕ್ಷದ ನಾಯಕರಿಗೆ ದೂರು ನೀಡಿದ್ದಾರೆನ್ನಲಾಗಿದೆ.
ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ನಲ್ಲಿ ಒಳಜಗಳ ಆರಂಭವಾಗಿದೆ. ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರು ಮೂಲ ಕಾಂಗ್ರೆಸ್ಸಿಗರ ನಡುವೆ ಒಳಜಗಳ ಆರಂಭವಾಗಿದೆ. ಮೂಲ ಕಾಂಗ್ರೆಸ್ಸಿಗರನ್ನು ಶರತ್ ಬಚ್ಚೇಗೌಡ ಕಡೆಗಣಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಮ್ಮ ಬೆಂಬಲಿಗರಿಗೆ ಮಾತ್ರ ಮಣೆ ಹಾಕುತ್ತಿದ್ದಾರೆ ಎಂದು ಮೂಲ ಕಾಂಗ್ರೆಸ್ಸಿಗರು ಸಿದ್ದರಾಮಯ್ಯ ಮತ್ತು ಡಿಕೆಶಿಗೆ ದೂರು ನೀಡಿದ್ದಾರೆನ್ನಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುನಿಶಾಮಣ್ಣ ವಿರುದ್ಧ ದೂರು ನೀಡಿದ್ದಾರೆ. ಎಲ್ಲಾ ಪದಾಧಿಕಾರಿಗಳ ಸ್ಥಾನಕ್ಕೆ ಶರತ್ ಬೆಂಬಲಿಗರನ್ನು ಆಯ್ಕೆ ಮಾಡಲಾಗಿದ್ದು, ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಲಾಗಿದೆ.
ಶರತ್ ಬಚ್ಚೇಗೌಡ ಅವರೊಂದಿಗೆ ಮುನಿಶಾಮಣ್ಣ 2019ರ ಚುನಾವಣೆಯಲ್ಲಿ ಶಾಮೀಲಾಗಿದ್ದರು ಎಂದು ಆರೋಪಿಸಲಾಗಿದೆ. ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಶರತ್ ಗೆ ಮನಿಶಾಮಣ್ಣ ಮನವೊಲಿಸಿದ್ದಾರೆ. ಶರತ್ ಗೆ ಬೆಂಬಲಿಸಿ ಕಾಂಗ್ರೆಸ್ ಗೆ ಬರುವಂತೆ ಮಾಡಿದ್ದಾರೆ. ಶಾಸಕ ಶರತ್ ಮತ್ತು ಮುನಿಶಾಮಣ್ಣ ಅವರದ್ದು ಎನ್ನಲಾದ ಆಡಿಯೋ ಸಮೇತ ಮೂಲ ಕಾಂಗ್ರೆಸ್ಸಿಗರು ದೂರು ನೀಡಿದ್ದಾರೆ. ಮುನಿಶಾಮಣ್ಣ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಆಡಿಯೋ ಸಮೇತ ಕಾಂಗ್ರೆಸ್ ನಾಯಕರಿಗೆ ದೂರು ನೀಡಿದ್ದಾರೆ.