ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಆಗಸ್ಟ್ 25ರಂದು ನಡೆಸಲು ಉದ್ದೇಶಿಸಿದ್ದ ಕೆಎಎಸ್ ನೇಮಕಾತಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲಿದೆ.
ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಆಗಸ್ಟ್ 27ರಂದು ಕೆಎಎಸ್ ಪೂರ್ವಭಾವಿ ಪರೀಕ್ಷೆ ನಡೆಸಲು ಅನುಮತಿ ಕೋರಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಕೆಪಿಎಸ್ಸಿ ಕಾರ್ಯದರ್ಶಿ ಪತ್ರ ಬರೆದಿದ್ದಾರೆ. ಆಗಸ್ಟ್ 25ರಂದು ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿತ್ತು. ಅದೇ ದಿನ ಬ್ಯಾಂಕಿಂಗ್ ಪರೀಕ್ಷೆ ಇರುವ ಕಾರಣ ಪರೀಕ್ಷೆ ಮುಂದೂಡುವಂತೆ ಅಭ್ಯರ್ಥಿಗಳಿಂದ ಒತ್ತಾಯ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ಆಗಸ್ಟ್ 27ರಂದು ಪರೀಕ್ಷೆ ನಡೆಸಲು ಅನುಮತಿ ಕೋರಲಾಗಿದೆ.