ಆಸ್ಟ್ರೇಲಿಯಾದ ಮೆಲ್ಬೊರ್ನ್ ನಲ್ಲಿ ದೇವಾಲಯಗಳನ್ನು ಧ್ವಂಸಗೊಳಿಸಿದ ನಂತರ ಖಲಿಸ್ತಾನಿಗಳು ಅಟ್ಟಹಾಸ ಮೆರೆದಿದ್ದು, ತ್ರಿವರ್ಣ ಧ್ವಜ ಹಿಡಿದ ಭಾರತೀಯರ ಮೇಲೆ ಕತ್ತಿ, ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ. ಖಲಿಸ್ತಾನ ಸಂಘಟನೆ ಬೆಂಬಲಿಗರಿಂದ ಹಲವರ ಮೇಲೆ ಹಲ್ಲೆ ನಡೆಸಲಾಗಿದೆ. ಮೇಲ್ಬೋರ್ನ್ ನಲ್ಲಿ ರಾಷ್ಟ್ರಧ್ವಜ ಹಿಡಿದ ಜನರನ್ನು ಖಲಿಸ್ತಾನಿ ಬೆಂಬಲಿಗರು ಅಟ್ಟಾಡಿಸಿ ಹೊಡೆದಿದ್ದಾರೆ. ಇಬ್ಬರು ಆರೋಪಿಗಳನ್ನು ಮೆಲ್ಬೊರ್ನ್ ಪೊಲೀಸರು ಬಂಧಿಸಿದ್ದಾರೆ.
ಮೆಲ್ಬೋರ್ನ್ ನಲ್ಲಿ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಪರ ಗುಂಪುಗಳ ವ್ಯಕ್ತಿಗಳು ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಭಾನುವಾರ ನಡೆದಿದೆ. ಘಟನೆಯ ವಿಡಿಯೋಗಳು ಅಂತರ್ಜಾಲದಲ್ಲಿ ವೈರಲ್ ಆಗಿವೆ.
ಮೆಲ್ಬೋರ್ನ್‌ನಲ್ಲಿರುವ ಹಿಂದೂ ದೇವಾಲಯಗಳನ್ನು ಖಲಿಸ್ತಾನ್ ಬೆಂಬಲಿಗರು ಭಿಂದ್ರನ್‌ವಾಲೆ ಪರ ಘೋಷಣೆಗಳು ಮತ್ತು ಗೋಡೆಗಳ ಮೇಲೆ ಭಾರತ ವಿರೋಧಿ ಗೀಚುಬರಹದಿಂದ ವಿರೂಪಗೊಳಿಸಿದ ಕೆಲವು ದಿನಗಳ ನಂತರ ಈ ದಾಳಿ ನಡೆದಿದೆ.