ಬೆಂಗಳೂರು: ಆಸ್ಟ್ರೇಲಿಯಾ ಪ್ರಜೆಯನ್ನು ಕಿಡ್ನ್ಯಾಪ್ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬೊಮ್ಮನಹಳ್ಳಿ ಠಾಣೆ ಪೊಲೀಸರು ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ಬಂಧಿಸಿದ್ದಾರೆ.
ಕಿಡ್ನ್ಯಾಪ್ ಪ್ರಕರಣದ ಮಾಸ್ಟರ್ ಮೈಂಡ್ ಮೊನೀಶ್, ಲೋಕೇಶ್, ಕಿಶೋರ್, ರವಿ, ದಿಲೀಪ್, ಸಂತೀಶ್ ಬಂಧಿತ ಆರೋಪಿಗಳು. ಮೊನೀಶ್ ಟ್ಯಾಟೂ ಹಾಕುವ ಕೆಲಸ ಮಾಡುತ್ತಿದ್ದ. ಇತರ ಆರೋಪಿಗಳು ಬಟ್ಟೆ ವ್ಯಾಪಾರ, ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು.
ಬೊಮ್ಮನಹಳ್ಳಿಯಲ್ಲಿ ವಾಸವಾಗಿದ್ದ ತನ್ನ ಅಣ್ಣ ಅಮಿತ್ ರಾಣಾನನ್ನು ನೋಡಲೆಂದು ಆಸ್ಟ್ರೇಲಿಯಾದಿಂದ ಬಂದಿದ್ದ ಆಸ್ಟ್ರೇಲಿಯಾ ಪ್ರಜೆ ಅಲೋಕ್ ರಾಣಾ ಡ್ರಗ್ಸ್ ಅಡಿಕ್ಟ್ ಆಗಿದ್ದ ಎನ್ನಲಾಗಿದೆ. ಆರೋಪಿ ಮೊನೋಶ್ ಜೊತೆಸಂಪರ್ಕ ಹೊಂದಿದ್ದರು. ಅಲ್ಲದೇ ಡಾರ್ಕ್ ವೆಬ್ ನಲ್ಲಿ ಮೊನೀಶ್ ಜೊತೆ ಗಾಂಜಾ ಖರೀದಿ ಮಾಡಿದ್ದರು. ಅಲೋಕ್ ರಾಣಾ ಬಳಿ ಭಾರಿ ಹಣವಿರಬಹುದು ಎಂದು ಮೊನೀಶ್ ಹಾಗೂ ಸಹಚರರು ಆತನನ್ನು ಕಿಡ್ನ್ಯಾಪ್ ಮಾಡಿ ಮನೆಯೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿ, ಅಲೋಕ್ ರಾಣ ಅಬ್ಯಾಂಕ್ ಖಾತೆಯಿಂದ 78 ಸಾವಿರ ರೂಪಾಯಿ ಹಣ ವರ್ಗಾಯಿಸಿಕೊಂಡಿದ್ದರು. ಅಲೋಕ್ ಅಣ್ಣನಿಂದಲು 40 ಸಾವಿರ ಹಣ ಪಡೆದಿದ್ದರು.
ಆರೋಪಿಗಳಿಂದ ಹೇಗೋ ತಪ್ಪಿಸಿಕೊಂಡು ಬಂದ ಅಲೋಕ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಒಟ್ಟು ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.