
ಥಾಣೆ: ಆಟೋವೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಭೀವಂಡಿ ಪ್ರದೇಶದಲ್ಲಿ ನಡೆದಿದೆ.
ವೇಗವಾಗಿ ಬಂದ ಆಟೋ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಪಲ್ಟಿಯಾಗಿ ಬಿದ್ದಿದೆ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
ಸತೀಶ್ ಜಾದವ್ (45), ಕಿಶೋರ್ ಪಾಟೀಲ್ (44) ಮೃತರು. ಭೀವಂಡಿ ತಾಲೂಕು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.