ರಾಯಚೂರು: ಹೆರಿಗೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿಯೇ ಮಹಿಳೆಯೊಬ್ಬರು ಆಟೋದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ನಡೆದಿದೆ.
ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಆಸ್ಪತ್ರೆ ದಾಖಲಾಗಿದ್ದಾರೆ. ಮಸ್ಕಿಯ ಮಹಿಳೆಯೊಬ್ಬರಿಗೆ ಶನಿವಾರ ಹೆರಿಗೆ ನೋವು ಕಾಣಿಸಿಕೊಂಡಿದೆ. ಆಟೋ ಬಾಡಿಗೆ ಪಡೆದು ಆಸ್ಪತ್ರೆಗೆ ಹೋಗುವ ಮಾರ್ಗ ಮತ್ತೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಚಾಲಕ ರಸ್ತೆ ಪಕ್ಕದಲ್ಲಿ ಆಟೋ ನಿಲ್ಲಿಸಿದ್ದಾರೆ. ಈ ವೇಳೆ ಸುತ್ತಮುತ್ತಲ ಮನೆಯವರು ಆಟೋ ಮರೆಯಾಗುವಂತೆ ಪರದೆ ಕಟ್ಟಿ ಹೆರಿಗೆ ಮಾಡಿಸಿದ್ದಾರೆ. ನಂತರ ತಾಯಿ, ನವಜಾತ ಶಿಶುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.