ಬಾಗಲಕೋಟೆ: ಆಟೋ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ನಾಗೂರು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಸಾವನ್ನಪ್ಪಿದ್ದಾರೆ. ಆಟೋದಲ್ಲಿದ್ದ ಈರಪ್ಪ ಪವಾಡ (45) ಹಾಗೂ ಬೈಕ್ ಸವಾರ ಅಭಿಷೇಕ್ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.