
ಬೆಂಗಳೂರು: ಚಲಿಸುತ್ತಿದ್ದ ಆಟೋದಿಂದ ಮಹಿಳೆ ಜಿಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ವೀರಣ್ಣಪಾಳ್ಯ ಬಳಿ ಮೊನ್ನೆ ರಾತ್ರಿ ಘಟನೆ ನಡೆದಿತ್ತು. ಘಟನೆಯ ಸಂಬಂಧ ಮಹಿಳೆಯರ ಪತಿ ಅಜರ್ ಖಾನ್ ನೀಡಿದ ಮಾಹಿತಿ ಮೇರೆಗೆ ಅಮೃತಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಟೋ ಚಾಲಕ ಸುನಿಲ್ ನನ್ನು ಬಂಧಿಸಿದ್ದಾರೆ.
ಗುರುವಾರ ರಾತ್ರಿ ನಮ್ಮ ಯಾತ್ರಿ ಆ್ಯಪ್ ಮೂಲಕ ಮಹಿಳೆ ಆಟೋ ಬುಕ್ ಮಾಡಿದ್ದು, ಚಾಲಕ ಮದ್ಯದ ಆಮಲಿನಲ್ಲಿ ಬೇರೆ ಜಾಗಕ್ಕೆ ಕರೆದೊಯ್ಯುವಾಗ ಆತಂಕಗೊಂಡ ಮಹಿಳೆ ಮಾರ್ಗ ಮಧ್ಯೆ ಚಲಿಸುತ್ತಿದ್ದ ಆಟೋದಿಂದ ಜಿಗಿದು ಅಪಾಯದಿಂದ ಪಾರಾಗಿದ್ದರು.